ದೇಶ

ಡಿ.8ಕ್ಕೆ ರೈತರು ಕರೆ ನೀಡಿರುವ ಭಾರತ್ ಬಂದ್ ಗೆ ಕಾಂಗ್ರೆಸ್, ಟಿಆರ್ ಎಸ್  ಬೆಂಬಲ

ಕೇಂದ್ರ ಸರ್ಕಾರದ ನೂತನ ಕಾನೂನುಗಳನ್ನು ವಿರೋಧಿಸಿ ಡಿಸೆಂಬರ್ 8ಕ್ಕೆ ರೈತರು ಕರೆ ನೀಡಿರುವ ಭಾರತ್ ಬಂದ್ ಗೆ ಕಾಂಗ್ರೆಸ್ ಮತ್ತು ತೆಲಂಗಾಣ ರಾಷ್ಟ್ರೀಯ ಸಮಿತಿ ಬೆಂಬಲ ವ್ಯಕ್ತಪಡಿಸಿವೆ.

ಡಿ.8ಕ್ಕೆ ರೈತರು ಕರೆ ನೀಡಿರುವ ಭಾರತ್ ಬಂದ್ ಗೆ ಕಾಂಗ್ರೆಸ್, ಟಿಆರ್ ಎಸ್  ಬೆಂಬಲ
ರೈತರ ಪ್ರತಿಭಟನೆ
Published On :

ನವದೆಹಲಿ: ಕೇಂದ್ರ ಸರ್ಕಾರದ ನೂತನ ಕಾನೂನುಗಳನ್ನು ವಿರೋಧಿಸಿ  ಡಿಸೆಂಬರ್ 8ಕ್ಕೆ ರೈತರು ಕರೆ ನೀಡಿರುವ ಭಾರತ್ ಬಂದ್ ಗೆ ಕಾಂಗ್ರೆಸ್ ಮತ್ತು ತೆಲಂಗಾಣ ರಾಷ್ಟ್ರೀಯ ಸಮಿತಿ ಬೆಂಬಲ ವ್ಯಕ್ತಪಡಿಸಿವೆ.

ಡಿಸೆಂಬರ್ 8 ರಂದು ನಡೆಯುವ ಪ್ರತಿಭಟನೆ ಸಂದರ್ಭದಲ್ಲಿ ಪಕ್ಷದ ಕಚೇರಿಗಳಲ್ಲಿ ಪ್ರತಿಭಟನೆ ನಡೆಸಲಾಗುವುದು, ಇದು ರೈತರಿಗೆ ರಾಹುಲ್ ಗಾಂಧಿ ಅವರ ಬೆಂಬಲವನ್ನು ಬಲಪಡಿಸುವ ಒಂದು ಹೆಜ್ಜೆಯಾಗಿದೆ. ಪ್ರತಿಭಟನೆ ಯಶಸ್ವಿಯಾಗಲಿದೆ ಎಂದು ಖಾತ್ರಿಪಡಿಸುವುದಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರ್ ತಿಳಿಸಿದ್ದಾರೆ.

ಈ ಮಧ್ಯೆ ತೆಲಂಗಾಣ ರಾಷ್ಟ್ರೀಯ ಸಮಿತಿ ಕೂಡಾ ಭಾರತ್ ಬಂದ್ ಗೆ ಬೆಂಬಲವನ್ನು ವ್ಯಕ್ತಪಡಿಸಿದೆ. ಬೆಂಬಲ ಯಶಸ್ವಿಯಾಗುವ ನಿಟ್ಟಿನಲ್ಲಿ ಪಕ್ಷ ಸಕ್ರಿಯವಾಗಿ ಪಾಲ್ಗೊಳ್ಳಲಿದೆ ಎಂದು ಟಿಆರ್ ಎಸ್ ಅಧ್ಯಕ್ಷ ಮತ್ತು ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಹೇಳಿದ್ದಾರೆ.

ಕಾನೂನು ರೀತಿಯ ರೈತರ ಹೋರಾಟಕ್ಕೆ ಬೆಂಬಲ ನೀಡುವುದಾಗಿ ಮುಖ್ಯಮಂತ್ರಿ ಕಾರ್ಯಾಲಯ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.