ಪಶ್ಚಿಮ ಬಂಗಾಳ: ಪ್ರತಿಭಟನೆ ವೇಳೆ ಲಾಠಿ ಚಾರ್ಜ್, ಬಿಜೆಪಿ ಕಾರ್ಯಕರ್ತ ಸಾವು
ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಬಿಜೆಪಿ ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ ಹಿಂಸಾಚಾರಕ್ಕೆ ತಿರುಗಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ನಡೆಸಿದ ಲಾಠ್ ಚಾರ್ಜ್ ನಿಂದಾಗಿ ಕೇಸರಿ ಪಕ್ಷದ ಓರ್ವ ಕಾರ್ಯಕರ್ತ ಮೃತಪಟ್ಟಿದ್ದಾರೆ.

ಕೋಲ್ಕತಾ: ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಬಿಜೆಪಿ ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ ಹಿಂಸಾಚಾರಕ್ಕೆ ತಿರುಗಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ನಡೆಸಿದ ಲಾಠ್ ಚಾರ್ಜ್ ನಿಂದಾಗಿ ಕೇಸರಿ ಪಕ್ಷದ ಓರ್ವ ಕಾರ್ಯಕರ್ತ ಮೃತಪಟ್ಟಿದ್ದಾರೆ.
ರಾಜ್ಯ ಸರ್ಕಾರದ ದುರಾಡಳಿತ ವಿರೋಧಿ ಬಿಜೆಪಿ ಯುವ ಮೋರ್ಚಾ ಕಳೆದ ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿದ್ದು, ಇಂದು ಸಿಲಿಗುರಿಯ ಮಿನಿ ಸಚಿವಾಲಯ ಕಟ್ಟಡಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದು, ಘಟನೆ ಪುಲಿನ್ ರಾಯ್ ಎಂಬ ಕಾರ್ಯಕರ್ತ ಮೃತಪಟ್ಟಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
ಪ್ರತಿಭಟನಾ ನಿರತ ಪಕ್ಷದ ಕಾರ್ಯಕರ್ತರ ಮೇಲೆ ಪೊಲೀಸರು ನಿರ್ದಯವಾಗಿ ಲಾಠಿ ಚಾರ್ಜ್ ಮಾಡಿದ್ದಾರೆ. ಪ್ರತಿಭಟನಾ ಮೆರವಣಿಗೆಯನ್ನು ನಮ್ಮ ಪಕ್ಷದ ಯುವ ಮೋರ್ಚಾ ಆಯೋಜಿಸಿತ್ತು. ಯುವ ಮೋರ್ಚಾದ ಕಾರ್ಮಿಕರು ಆಡಳಿತ ಕಟ್ಟಡದತ್ತ ಸಾಗುತ್ತಿದ್ದ ವೇಳೆ ಲಾಠಿ ಚಾರ್ಜ್ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ಅವರು ಹೇಳಿದ್ದಾರೆ.
ಪೊಲೀಸರು ಅನಗತ್ಯವಾಗಿ ನಮ್ಮ ಕಾರ್ಮಿಕರೊಬ್ಬರ ಸಾವಿಗೆ ಕಾರಣವಾಗಿದ್ದಾರೆ. ಲಾಠಿ ಚಾರ್ಜ್ ನಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಾರ್ಯಕರ್ತನನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ವೈದ್ಯರು ಮೃತಪಟ್ಟಿರುವುದಾಗಿ ಹೇಳಿದರು ಎಂದು ಘೋಷ್ ತಿಳಿಸಿದ್ದಾರೆ.
ಸಾವಿರಾರು ಬಿಜೆಪಿ ಕಾರ್ಯಕರ್ತರು ಪೊಲೀಸರು ಹಾಕಿದ್ದ ಬ್ಯಾರಿಕೇಡ್‌ಗಳನ್ನು ಕಿತ್ತುಹಾಕಿ ಮಿನಿ ಸಚಿವಾಲಯದ ಕಟ್ಟಡದ ಕಡೆಗೆ ಹೋಗಲು ಯತ್ನಿಸಿದಾಗ ಈ ಘಟನೆ ನಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


