ಕೋವಿಡ್-19: ದೇಶದಲ್ಲಿಂದು 32,981 ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 96.77 ಲಕ್ಷ
ದೇಶದಲ್ಲಿಂದು 32,981 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 96,77,203ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಮಾಹಿತಿ ನೀಡಿದೆ.

ನವದೆಹಲಿ: ದೇಶದಲ್ಲಿಂದು 32,981 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 96,77,203ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಮಾಹಿತಿ ನೀಡಿದೆ.
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 391 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ 1,40,573ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ.
ಈ ನಡುವೆ 96,77,203 ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 39,109 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇದರೊಂದಿಗೆ ಈ ವರೆಗೂ ಚೇತರಿಸಿಕೊಂಡವರ ಸಂಖ್ಯೆ 91,39,901ಕ್ಕೆ ತಲುಪಿದೆ. ಇದೀಗ ದೇಶದಲ್ಲಿ ಸಕ್ರಿಯ ಪ್ರಕರಣ ಸಂಖ್ಯೆ 3,96,729ಕ್ಕೆ ಇಳಿಕೆಯಾಗಿದೆ.
ಭಾರತದಲ್ಲಿ ಒಂದೇ ದಿನ 8,01,081 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 14,77,87,656 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


