ದೇಶ

'ಆತ್ಮ ನಿರ್ಭರ ಭಾರತ್ ರೊಜ್ ಗಾರ್ ಯೋಜನೆ'ಗೆ 22,810 ಕೋಟಿ ರೂ. ಹಂಚಿಕೆ: ಕೇಂದ್ರ ಸಂಪುಟ ಒಪ್ಪಿಗೆ

ಕೋವಿಡ್ ಹಿನ್ನೆಲೆಯಲ್ಲಿ ದೇಶದಲ್ಲಿ ನಿರುದ್ಯೋಗ ಸಮಸ್ಯೆ ನಿವಾರಿಸಿ ಹೊಸ ಉದ್ಯೋಗಗಳನ್ನು ಸೃಷ್ಟಿಸಲು ಇತ್ತೀಚೆಗೆ ಘೋಷಿಸಲಾಗಿದ್ದ 'ಆತ್ಮ ನಿರ್ಭರ ಭಾರತ್ ರೊಜ್ ಗಾರ್ ಯೋಜನೆ'ಗೆ ಕೇಂದ್ರ ಸರ್ಕಾರ ಹಣವನ್ನು ಹಂಚಿಕೆ ಮಾಡಿದೆ.

'ಆತ್ಮ ನಿರ್ಭರ ಭಾರತ್ ರೊಜ್ ಗಾರ್ ಯೋಜನೆ'ಗೆ 22,810 ಕೋಟಿ ರೂ. ಹಂಚಿಕೆ: ಕೇಂದ್ರ ಸಂಪುಟ ಒಪ್ಪಿಗೆ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಕೋವಿಡ್ ಹಿನ್ನೆಲೆಯಲ್ಲಿ ದೇಶದಲ್ಲಿ ನಿರುದ್ಯೋಗ ಸಮಸ್ಯೆ ನಿವಾರಿಸಿ ಹೊಸ ಉದ್ಯೋಗಗಳನ್ನು ಸೃಷ್ಟಿಸಲು ಇತ್ತೀಚೆಗೆ ಘೋಷಿಸಲಾಗಿದ್ದ 'ಆತ್ಮ ನಿರ್ಭರ ಭಾರತ್ ರೊಜ್ ಗಾರ್ ಯೋಜನೆ'ಗೆ ಕೇಂದ್ರ ಸರ್ಕಾರ ಹಣವನ್ನು ಹಂಚಿಕೆ ಮಾಡಿದೆ. 

ಈ ಯೋಜನೆಯ ಅನುಷ್ಠಾನಕ್ಕೆ 22,810 ಕೋಟಿ ರೂ. ಹಂಚಿಕೆ ಮಾಡಲಾಗಿದೆ ಎಂದು ಪ್ರಕಟಿಸಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ 1,584 ಕೋಟಿ ರೂ. ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದೆ.

ಈ ಸಂಬಂಧ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಂಪುಟ ಸಭೆಯ ನಿರ್ಧಾರಗಳನ್ನು ಕೇಂದ್ರ ಸಚಿವರಾದ ರವಿಶಂಕರ್ ಪ್ರಸಾದ್ ಹಾಗೂ ಸಂತೋಷ್ ಗಂಗ್ವಾರ್ ಮಾಧ್ಯಮಗಳಿಗೆ ವಿವರಿಸಿದರು.

ಆತ್ಮನಿರ್ಭರ ಭಾರತ್ ರೋಜಗಾರ್ ಯೋಜನೆಯ ಭಾಗವಾಗಿ ಹೊಸದಾಗಿ ಉದ್ಯೋಗ ಕಲ್ಪಿಸುವ ಸಂಸ್ಥೆಗಳು, ಕೈಗಾರಿಕೆಗಳ ಪರವಾಗಿ ಉದ್ಯೋಗಿ, ಸಂಸ್ಥೆ ಪಾಲನ್ನು ಕೇಂದ್ರ ಸರ್ಕಾರ ಭರಿಸಲಿದೆ ಎಂದು ಸಂತೋಷ್ ಗಂಗ್ವಾರ್ ಹೇಳಿದರು.

ದೇಶಾದ್ಯಂತ ದೊಡ್ಡ ಪ್ರಮಾಣದಲ್ಲಿ ವೈ-ಫೈ ನೆಟ್ ವರ್ಕ್ ವಿಸ್ತರಿಸಲು ಪಿಎಂ ವಾಣಿ(ವೈಫೈ ಆಕ್ಸೆಸ್ ನೆಟ್ವರ್ಕ್ ಇಂಟರ್ಫೇಸ್) ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ರವಿಶಂಕರ್ ಪ್ರಸಾದ್ ಹೇಳಿದ್ದಾರೆ.

ದೇಶದಲ್ಲಿ ವೈಫೈನಲ್ಲಿ ಕ್ರಾಂತಿ ತರಲು ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಇದರ ಭಾಗವಾಗಿ ಒಂದು ಕೋಟಿ ದತ್ತಾಂಶ ಕೇಂದ್ರಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ವೈಫೈಗಾಗಿ ಯಾವುದೇ ಪರವಾನಗಿ ಅಥವಾ ನೋಂದಣಿ ಇರುವುದಿಲ್ಲ ಎಂದು ಅವರು ಹೇಳಿದರು. ಇದಲ್ಲದೆ, ಸಮುದ್ರದೊಳಗಿನಿಂದ ಜಲಾಂತರ್ಗಾಮಿ ಆಪ್ಟಿಕಲ್ ಫೈಬರ್ ಕೇಬಲ್ ಮೂಲಕ ಲಕ್ಷದ್ವೀಪದಲ್ಲಿ ಹೈಸ್ಪೀಡ್ ಬ್ರಾಡ್ಬ್ಯಾಂಡ್ ಸೇವೆ ಒದಗಿಸುವ ಯೋಜನೆಗೆ ಸಂಪುಟ ಅನುಮೋದನೆ ನೀಡಿದ್ದು ಇದಕ್ಕಾಗಿ 1,072 ಕೋಟಿ ರೂ. ವೆಚ್ಚವಾಗಲಿದೆ ಎಂದರು.

ಆದೇ ರೀತಿ ಈಶಾನ್ಯ ರಾಜ್ಯ ಅರುಣಾಚಲ ಪ್ರದೇಶ ಹಾಗೂ ಅಸ್ಸಾಂನ ಎರಡು ಜಿಲ್ಲೆಗಳಲ್ಲಿ ವಿಸ್ತೃತ ಮೊಬೈಲ್ ವ್ಯಾಪ್ತಿಗಾಗಿ ಯುನಿವರ್ಸಲ್ ಸರ್ವಿಸ್ ಆಬ್ಲಿಗೇಶನ್ ಫಂಡ್(ಯುಎಸ್ಒಎಫ್) ಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಯೋಜನೆಯ ಮೂಲಕ 2,374 ಗ್ರಾಮಗಳಿಗೆ ಮೊಬೈಲ್ ವ್ಯಾಪ್ತಿ ಲಭಿಸಲಿದೆ ಈ ಯೋಜನೆಯನ್ನು 2022 ರ ಡಿಸೆಂಬರ್ ವೇಳೆಗೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.