ಮೂರು ತಿಂಗಳು... 101 ಆನ್ ಲೈನ್ ಕಾರ್ಯಕ್ರಮಗಳು ಪ್ರಧಾನಿ ದಾಖಲೆ
ಪ್ರಧಾನಿ ನರೇಂದ್ರ ಮೋದಿ ಸೆಪ್ಟಂಬರ್ ತಿಂಗಳನಿಂದ ನವಂಬರ್ ವರೆಗೆ ಮೂರು ತಿಂಗಳ ಸಮಯದಲ್ಲಿ 101 ಆನ್ ಲೈನ್ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ ಎಂದು ಸರ್ಕಾರಿ ಮೂಲಗಳು ಹೇಳಿವೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸೆಪ್ಟಂಬರ್ ತಿಂಗಳನಿಂದ ನವಂಬರ್ ವರೆಗೆ ಮೂರು ತಿಂಗಳ ಸಮಯದಲ್ಲಿ 101 ಆನ್ ಲೈನ್ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ ಎಂದು ಸರ್ಕಾರಿ ಮೂಲಗಳು ಹೇಳಿವೆ.
ಅಂದರೆ ದಿನಕ್ಕೆ ಸರಾಸರಿ ಒಂದಕ್ಕಿಂತಲೂ ಹೆಚ್ಚು ಕಾರ್ಯಕ್ರಮಗಳಲ್ಲಿ ಪ್ರಧಾನಿ ಪಾಲ್ಗೊಂಡಿದ್ದಾರೆ.
ಆದೇ ರೀತಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಪ್ರಧಾನ ಮಂತ್ರಿ ನರೇಂದ್ರ ಮೋದಿ ತಂತ್ರಜ್ಞಾನ ಬಳಸಿಕೊಂಡಿರುವುದು ಶೇ.25 ರಷ್ಟು ಹೆಚ್ಚು. ಪ್ರಮುಖವಾಗಿ ಆನ್ ಲೈನ್ ಕಾರ್ಯಕ್ರಮಗಳಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ, ಕೋವಿಡ್ -19 ಸಾಂಕ್ರಾಮಿಕ ಕುರಿತ ಮುಖ್ಯಮಂತ್ರಿಗಳೊಂದಿಗೆ ಸಮಾವೇಶ, ಅಂತರಾಷ್ಟ್ರೀಯ ನಾಯಕರೊಂದಿಗೆ ಶೃಂಗಸಭೆಗಳು, ಯುವ ಉದ್ಯಮಿಗಳೊಂದಿಗೆ ಸಂವಾದದಂತಹ ವಿವಿಧ ಕಾರ್ಯಕ್ರಮಗಳು ಇದರಲ್ಲಿ ಸೇರಿವೆ ಎಂದು ತಿಳಿಸಿದ್ದಾರೆ.
ಈ ಕಾರ್ಯಕ್ರಮಗಳ ಜತೆಗೆ ಅಂತರಿಕ ಸಮಾವೇಶಗಳು ಕೂಡಾ ಗಣನೀಯವಾಗಿ ಹೆಚ್ಚಳಗೊಂಡಿವೆ ಎಂದು ಸಂಬಂಧಿತ ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


