ದೇಶ

ರೋಷ್ನಿ ಕಾಯ್ದೆ ರದ್ದತಿ: ಡಿ.21 ರ ವೇಳೆಗೆ ನಿರ್ಧಾರ ಕೈಗೊಳ್ಳಿ; ಜಮ್ಮು-ಕಾಶ್ಮೀರ ಹೈಕೋರ್ಟ್ ಗೆ 'ಸುಪ್ರೀಂ'; ಏನಿದು ರೋಷ್ನಿ ಕಾಯ್ದೆ?

ಸರ್ಕಾರಿ ಭೂಮಿಯಲ್ಲಿರುವವರಿಗೆ ಹಕ್ಕು ಸ್ವಾಮ್ಯ ನೀಡುವುದರ ರೋಷ್ನಿ ಕಾಯ್ದೆಯನ್ನು ರದ್ದುಗೊಳಿಸಿದ ಆದೇಶವನ್ನು ಮರುಪರಿಶೀಲಿಸುವುದಕ್ಕೆ ಕೇಳಿರುವ ಅರ್ಜಿಯ ಕುರಿತು ಡಿ.21 ರ ವೇಳೆಗೆ ನಿರ್ಧರಿಸುವಂತೆ ಸುಪ್ರೀಂ ಕೋರ್ಟ್ ಜಮ್ಮು-ಕಾಶ್ಮೀರ ಹೈಕೋರ್ಟ್ ಸೂಚನೆ ನೀಡಿದೆ.

ರೋಷ್ನಿ ಕಾಯ್ದೆ ರದ್ದತಿ: ಡಿ.21 ರ ವೇಳೆಗೆ ನಿರ್ಧಾರ ಕೈಗೊಳ್ಳಿ; ಜಮ್ಮು-ಕಾಶ್ಮೀರ ಹೈಕೋರ್ಟ್ ಗೆ 'ಸುಪ್ರೀಂ'; ಏನಿದು ರೋಷ್ನಿ ಕಾಯ್ದೆ?
ಸುಪ್ರೀಂ ಕೋರ್ಟ್
Published On :

ನವದೆಹಲಿ: ಸರ್ಕಾರಿ ಭೂಮಿಯಲ್ಲಿರುವವರಿಗೆ ಹಕ್ಕು ಸ್ವಾಮ್ಯ ನೀಡುವುದರ ರೋಷ್ನಿ ಕಾಯ್ದೆಯನ್ನು ರದ್ದುಗೊಳಿಸಿದ ಆದೇಶವನ್ನು ಮರುಪರಿಶೀಲಿಸುವುದಕ್ಕೆ ಕೇಳಿರುವ ಅರ್ಜಿಯ ಕುರಿತು ಡಿ.21 ರ ವೇಳೆಗೆ ನಿರ್ಧರಿಸುವಂತೆ ಸುಪ್ರೀಂ ಕೋರ್ಟ್ ಜಮ್ಮು-ಕಾಶ್ಮೀರ ಹೈಕೋರ್ಟ್ ಸೂಚನೆ ನೀಡಿದೆ. 

ಹೈಕೋರ್ಟ್ ನ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳನ್ನು ಜನವರಿ ಕೊನೆಯ ವಾರದಲ್ಲಿ ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.

ನ್ಯಾ.ಎನ್ ವಿ ರಮಣ ಪೀಠದ ಎದುರು ಜಮ್ಮು-ಕಾಶ್ಮೀರದ ಆಡಳಿತದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಕೋರ್ಟ್ ಮೊರೆ ಹೋಗಿರುವವರು ಭೂಕಬಳಿಕೆ ಅಥವಾ ಅನಧಿಕೃತ ವ್ಯಕ್ತಿಗಳಲ್ಲದ ಕಾರಣ ಅವರ ವಿರುದ್ಧ ಯಾವುದೇ ಕ್ರಮವನ್ನೂ ಕೈಗೊಳ್ಳುವುದಿಲ್ಲ ಎಂದು ಮೌಖಿಕ ಭರವಸೆ ನೀಡಿದ್ದಾರೆ. 

ಜಮ್ಮು-ಕಾಶ್ಮೀರ ಕೇಂದ್ರಾಡಳಿತ ಪ್ರದೇಶ ಈಗಾಗಲೇ ಮರುಪರಿಶೀಲನಾ ಅರ್ಜಿ ಸಲ್ಲಿಸಿದೆ ಎಂದೂ ಮೆಹ್ತಾ ಕೋರ್ಟ್ ಗೆ ತಿಳಿಸಿದ್ದಾರೆ. 

ರೋಷ್ನಿ ಕಾಯ್ದೆಯನ್ನು ಅಕ್ರಮ, ಸಂವಿಧಾನ ವಿರೋಧಿ ಎಂದು ಹೇಳಿದ್ದ ಜಮ್ಮು-ಕಾಶ್ಮೀರ ಹೈಕೋರ್ಟ್ ಈ ಕಾಯ್ದೆಯಡಿ ಭೂಮಿ ಮಂಜೂರು ಮಾಡಿರುವುದಕ್ಕೆ ಸಂಬಂಧಿಸಿದಂತೆ ಅ.9 ರಂದು ಸಿಬಿಐ ತನಿಖೆಗೆ ಆದೇಶಿಸಿತ್ತು. ಸರ್ಕಾರಿ ಭೂಮಿಯಲ್ಲಿದ್ದವರಿಗೆ ಹಕ್ಕು ಪತ್ರ ವಿತರಣೆ ಹಾಗೂ ವಿದ್ಯುತ್ ಯೋಜನೆಗಳಿಗೆ ಹಣಕಾಸು ಒದಗಿಸಲು ಸಂಪನ್ಮೂಲಗಳನ್ನು ಉತ್ಪಾದಿಸುವ ಉದ್ದೇಶದಿಂದ 2001 ರಲ್ಲಿ ರೋಷ್ನಿ ಕಾಯ್ದೆಯನ್ನು ಜಾರಿಗೊಳಿಸಲಾಗಿತ್ತು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.