ದೇಶ

ನಡ್ಡಾ ಬೆಂಗಾವಲು ಪಡೆ ಮೇಲೆ ದಾಳಿ: ಪಶ್ಚಿಮ ಬಂಗಾಳ ಡಿಜಿಪಿ, ಮುಖ್ಯ ಕಾರ್ಯದರ್ಶಿಗೆ ಕೇಂದ್ರ ಗೃಹ ಸಚಿವಾಲಯ ಸಮನ್ಸ್!

ಪಶ್ಚಿಮ ಬಂಗಾಳ ರಾಜ್ಯದಲ್ಲಿನ ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ರಾಜ್ಯಪಾಲರಿಂದ ವರದಿ ಪಡೆದಿರುವ ಕೇಂದ್ರ ಗೃಹ ಸಚಿವಾಲಯ, ಆ ರಾಜ್ಯದ ಪೊಲೀಸ್ ಮಹಾನಿರ್ದೇಶಕರು ಹಾಗೂ ಮುಖ್ಯ ಕಾರ್ಯದರ್ಶಿಗೆ ಸಮನ್ಸ್ ನೀಡಿದೆ.

ನಡ್ಡಾ ಬೆಂಗಾವಲು ಪಡೆ ಮೇಲೆ ದಾಳಿ: ಪಶ್ಚಿಮ ಬಂಗಾಳ ಡಿಜಿಪಿ, ಮುಖ್ಯ ಕಾರ್ಯದರ್ಶಿಗೆ ಕೇಂದ್ರ ಗೃಹ ಸಚಿವಾಲಯ ಸಮನ್ಸ್!
ಪ್ರತಿಭಟನಾನಿರತ ಬಿಜೆಪಿ ಕಾರ್ಯಕರ್ತರು
Published On :

ನವದೆಹಲಿ: ಪಶ್ಚಿಮ ಬಂಗಾಳ ರಾಜ್ಯದಲ್ಲಿನ ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ರಾಜ್ಯಪಾಲರಿಂದ ವರದಿ ಪಡೆದಿರುವ ಕೇಂದ್ರ ಗೃಹ ಸಚಿವಾಲಯ, ಆ ರಾಜ್ಯದ ಪೊಲೀಸ್ ಮಹಾನಿರ್ದೇಶಕರು ಹಾಗೂ ಮುಖ್ಯ ಕಾರ್ಯದರ್ಶಿಗೆ ಸಮನ್ಸ್ ನೀಡಿದೆ. 

ಗುರುವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಅವರ ಬೆಂಗಾವಲು ವಾಹನದ ಮೇಲೆ ಬಗ್ಗೆ ರಾಜ್ಯಪಾಲ ಜಗದೀಪ್ ದಾನ್ಕಾರ್  ಕಳವಳ ವ್ಯಕ್ತಪಡಿಸಿದ ನಂತರ ಈ ಬೆಳವಣಿಗೆ ನಡೆದಿದೆ. ಜೆ. ಪಿ. ನಡ್ಡಾ ಅವರ ಸಭೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುವ ಸಾಧ್ಯತೆ ಬಗ್ಗೆ ಎಚ್ಚರಿಕೆ ನೀಡಲಾಗಿದ್ದರೂ ಇಂತಹ ಚಟುವಟಿಕೆಗಳನ್ನು ತಡೆಯುವಲ್ಲಿ ಆಡಳಿತ ವಿಫಲವಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ರಾಜ್ಯಪಾಲರು, ಜೆಪಿ ನಡ್ಡಾ  ರ‍್ಯಾಲಿ  ವೇಳೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುವ ಸಾಧ್ಯತೆ ಬಗ್ಗೆ ಡಿಜಿಪಿ ಮತ್ತು ಮುಖ್ಯ ಕಾರ್ಯದರ್ಶಿಗೆ ಎಚ್ಚರಿಕೆ ನೀಡಲಾಗಿತ್ತು ಆದಾಗ್ಯೂ, ಅವರು ಸ್ಪಂದಿಸಿದ ರೀತಿ ರಾಜ್ಯದಲ್ಲಿ ಸಂವಿಧಾನಿಕ ಹುದ್ದೆಗಳ ವೈಫಲ್ಯವನ್ನು ಎತ್ತಿ ತೋರಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 ರ‍್ಯಾಲಿಯನ್ನುದ್ದೇಶಿಸಿ ಭಾಷಣ ಮಾಡಲು ತೆರಳುತ್ತಿದ್ದ ಜೆ. ಪಿ. ನಡ್ಡಾ ಅವರ ಬೆಂಗಾವಲು ವಾಹನದ ಮೇಲೆ ದಕ್ಷಿಣ 24 ಪರಗಣ ಜಿಲ್ಲೆಯ ಡೈಮಂಡ್ ಹರ್ಬೊರು ಪ್ರದೇಶದ ಸಿರಾಕೊಲ್ ಬಳಿ ಟಿಎಂಸಿ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದರು. ಕೈಲಾಸ್ ವಿಜಯ್ ವರ್ಗೀಸ್ ಸೇರಿದಂತೆ ಹಲವು ಬಿಜೆಪಿ ಮುಖಂಡರು ಗಾಯಗೊಂಡಿರುವುದಾಗಿ ಬಿಜೆಪಿ ಪಕ್ಷ ಹೇಳಿದೆ.
ಆದಾಗ್ಯೂ, ಪರಿಸ್ಥಿತಿ ಶಾಂತವಾಗಿತ್ತೆಂದು ಪಶ್ಚಿಮ ಬಂಗಾಳ ಪೊಲೀಸರು ಸಮರ್ಥಿಸಿಕೊಳ್ಳುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.