ನೂತನ ಸಂಸತ್ ಭವನ ಶಂಕುಸ್ಥಾಪನೆ: ಬಸವಣ್ಣನವರ ಅನುಭವ ಮಂಟಪ ಉಲ್ಲೇಖಿಸಿ ಕನ್ನಡದಲ್ಲಿ ಮಾತನಾಡಿದ ಪ್ರಧಾನಿ ಮೋದಿ
ನೂತನ ಸಂಸತ್ತು ಭವನ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ ನಂತರ ವೇಳೆ 12ನೇ ಶತಮಾನದಲ್ಲಿ ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪದ ಬಗ್ಗೆ ಪ್ರಸ್ತಾಪಿಸಿ ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲಿ ಮಾತನಾಡಿದ್ದು ಎಲ್ಲರ ಗಮನ ಸೆಳೆದಿದೆ.

ನವದೆಹಲಿ: ನೂತನ ಸಂಸತ್ತು ಭವನ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ ನಂತರ ವೇಳೆ 12ನೇ ಶತಮಾನದಲ್ಲಿ ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪದ ಬಗ್ಗೆ ಪ್ರಸ್ತಾಪಿಸಿ ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲಿ ಮಾತನಾಡಿದ್ದು ಎಲ್ಲರ ಗಮನ ಸೆಳೆದಿದೆ.
12ನೇ ಶತಮಾನದಲ್ಲಿ ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪದ ಆಧಾರದ ಮೇಲೆ ಸಂಸತ್ತು ಭವನ ನಿರ್ಮಾಣ ರೂಪುಗೊಂಡಿತು. ಬಸವಣ್ಣನವರು ಹೇಳಿದ್ದರು, ಈ ಅನುಭವ ಮಂಟಪ ನಾಡಿನ, ರಾಜ್ಯ-ರಾಷ್ಟ್ರದ ಜನರ ಉನ್ನತಿಗೆ ಕೆಲಸ ಮಾಡುತ್ತದೆ. ಅನುಭವ ಮಂಟಪ ಲೋಕತಂತ್ರ, ಜನಹಿತದ ಸ್ವರೂಪವಾಗಿತ್ತು ಎಂದು ಹೇಳಿ ಪ್ರಧಾನಿ ಮೋದಿ ಗಮನ ಸೆಳೆದರು.
ಅವರು ಮಾತನಾಡಿರುವ ವಿಡಿಯೊ ವ್ಯಾಪಕವಾಗಿ ವೈರಲ್ ಆಗುತ್ತಿದೆ. ಹೊಸ ಸಂಸತ್ತು ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಐತಿಹಾಸಿಕ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ವಿಶ್ವದ ಮೊದಲ ಸಂಸತ್ತು ಅನುಭವ ಮಂಟಪ ಎಂದು ಹೇಳಿ ಒತ್ತು ನೀಡುವ ಮೂಲಕ ಭಾರತದ ಪ್ರಜಾಪ್ರಭುತ್ವಕ್ಕೆ ಆಳವಾದ ಸಾಂಸ್ಕೃತಿಕ ಹಿನ್ನೆಲೆಯಿದೆ ಎಂದು ಹೇಳಿದ್ದಾರೆ ಎಂದು ಬಿಜೆಪಿಯ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


