ದೇಶ

ಪಂಚಾಯತಿ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಮೋಸ: ಗೆಹ್ಲೋಟ್ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದ ಬಿಟಿಪಿ 

ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ತಮಗೆ ವಂಚನೆ ಆಗಿದೆ ಎಂದು ಆರೋಪಿಸಿರುವ ಬಿಟಿಪಿ ರಾಜಸ್ಥಾನದಲ್ಲಿ ಸಿಎಂ ಅಶೋಕ್‌ ಗೆಹ್ಲೋಟ್‌ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಭಾರತೀಯ ಟ್ರಿಬಲ್‌ ಪಕ್ಷ ಹಿಂಪಡೆದುಕೊಂಡಿದೆ

ಪಂಚಾಯತಿ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಮೋಸ: ಗೆಹ್ಲೋಟ್ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದ ಬಿಟಿಪಿ 
ಅಶೋಕ್ ಗೆಹ್ಲೋಟ್
Published On :

ಜೈಪುರ: ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ತಮಗೆ ವಂಚನೆ ಆಗಿದೆ ಎಂದು ಆರೋಪಿಸಿರುವ ಬಿಟಿಪಿ ರಾಜಸ್ಥಾನದಲ್ಲಿ ಸಿಎಂ ಅಶೋಕ್‌ ಗೆಹ್ಲೋಟ್‌ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಭಾರತೀಯ ಟ್ರಿಬಲ್‌ ಪಕ್ಷ  ಹಿಂಪಡೆದುಕೊಂಡಿದೆ. 

ಇಲ್ಲಿನ ದುಂಗಾರ್‌ಪುರ್‌ನಲ್ಲಿ ಜಿಲ್ಲಾ ಪಂಚಾಯತ್‌ ಚುನಾವಣೆ ವೇಳೆ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳು ಬಿಜೆಪಿಗೆ ಸೇರಿ ಬಿಟಿಪಿ ಪಕ್ಷಕ್ಕೆ ಅಧಿಕಾರ ತಪ್ಪಿಸಿದ್ದರಿಂದ ಬಿಟಿಪಿಯ ವರಿಷ್ಠರು ಕಾಂಗ್ರೆಸ್‌ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದಿದ್ದಾರೆ ಎನ್ನಲಾಗಿದೆ.

ಜಿಲ್ಲಾ ಮುಖ್ಯಸ್ಥರ ಹುದ್ದೆಗೆ ಸ್ವತಂತ್ರವಾಗಿ ನಾಮಪತ್ರ ಸಲ್ಲಿಸುವ ಮೂಲಕ ಚುನಾವಣೆಯಲ್ಲಿ ಸ್ಪರ್ಧಿಸಿದ ಬಿಜೆಪಿಯ ಸೂರ್ಯ ಅಹಾರಿ, ಕಾಂಗ್ರೆಸ್ ಬೆಂಬಲದೊಂದಿಗೆ ಬಿಟಿಪಿ ಬೆಂಬಲಿತ ಪಾರ್ವತಿಯನ್ನು ಒಂದೇ ಮತದಿಂದ ಸೋಲಿಸಿ ಜಿಲ್ಲಾ ಅಧ್ಯಕ್ಷರ ಹುದ್ದೆಯಲ್ಲಿ ಗೆಲುವು ಸಾಧಿಸಿದರು.

ಗೆಹ್ಲೋಟ್‌ ಸರ್ಕಾರ ಇಕ್ಕಟ್ಟಿನಲ್ಲಿ ಇದ್ದಾಗ ಸಹಾಯ ಮಾಡಿದೆವು. ಆದರೆ ಅವರು ನಮಗೆ ಮೋಸ ಮಾಡಿದರು ಎಂದು ಬಿಟಿಪಿ ಮುಖಂಡರು ಆರೋಪಿಸಿದ್ದಾರೆ.  200 ಸದಸ್ಯ ಬಲದ ರಾಜಸ್ಥಾನ ವಿಧಾನಸಭೆಯಲ್ಲಿ ಕಾಂಗ್ರೆಸ್‌ 105 ಸ್ಥಾನಗಳನ್ನು ಹೊಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.