ದೇಶ

ಕೇರಳದಲ್ಲಿ ಎಲ್ಲರಿಗೂ ಉಚಿತ ಕೋವಿಡ್-19 ಲಸಿಕೆ: ಸಿಎಂ ಪಿಣರಾಯಿ ವಿಜಯನ್

ಕೇರಳದ ಎಲ್ಲರಿಗೂ ಕೋವಿಡ್ -19 ಲಸಿಕೆ ಉಚಿತವಾಗಿ ಲಭ್ಯವಾಗಲಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಹೇಳಿದ್ದಾರೆ.

ಕೇರಳದಲ್ಲಿ ಎಲ್ಲರಿಗೂ ಉಚಿತ ಕೋವಿಡ್-19 ಲಸಿಕೆ: ಸಿಎಂ ಪಿಣರಾಯಿ ವಿಜಯನ್
ಪಿಣರಾಯ್ ವಿಜಯನ್
Published On :

ತಿರುವನಂತಪುರಂ: ಕೇರಳದ ಎಲ್ಲರಿಗೂ ಕೋವಿಡ್ -19 ಲಸಿಕೆ ಉಚಿತವಾಗಿ ಲಭ್ಯವಾಗಲಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಹೇಳಿದ್ದಾರೆ.

"ಲಸಿಕೆಗಾಗಿ ಯಾರ ಮೇಲೂ ಶುಲ್ಕ ವಿಧಿಸಲಾಗುವುದಿಲ್ಲ. ಇದು ಸರ್ಕಾರದ ನಿಲುವು" ಎಂದು ಪಿಣರಾಯಿ ವಿಜಯನ್ ಅವರು ಕಣ್ಣೂರಿನಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ತಮಿಳುನಾಡು ಮತ್ತು ಮಧ್ಯಪ್ರದೇಶ ಸೇರಿದಂತೆ ಹಲವು ರಾಜ್ಯಗಳು ಈಗಾಗಲೇ ಕೋವಿಡ್ ಲಸಿಕೆಯನ್ನು ಉಚಿತವಾಗಿ ನೀಡುವುದಾಗಿ ಘೋಷಣೆ ಮಾಡಿವೆ. ಈಗ ಕೇರಳ ಸಹ ಉಚಿತವಾಗಿ ಲಸಿಕೆ ನೀಡುವುದಾಗಿ ಹೇಳಿದೆ.

ಕೇಂದ್ರದಿಂದ ರಾಜ್ಯಕ್ಕೆ ನೀಡಲಾಗುವ ಲಸಿಕೆಯ ಪ್ರಮಾಣ ಎಷ್ಟು ಎಂಬುದು ಇನ್ನೂ ತಿಳಿದುಬಂದಿಲ್ಲ. ಆದರೆ ಕೋವಿಡ್-19 ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಇದು ದೊಡ್ಡ ರಿಲೀಫ್ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.