ದೇಶ

ಗುಜರಾತ್ ಸಚಿವರ ಮೇಲೆ ಶೂ ಎಸೆದಿದ್ದ ಗೋಪಾಲ್ ಇಟಾಲಿಯಾ ಈಗ ಎಎಪಿ ರಾಜ್ಯ ಉಪಾಧ್ಯಕ್ಷ

ಮುಂದಿನ ವರ್ಷದ ಆರಂಭದಲ್ಲಿ ಗುಜರಾತ್‌ನ ಸ್ಥಳೀಯ ಸಂಸ್ಥೆಗಳಿಗೆ ನಡೆಯುವ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧಿಸುವುದಾಗಿ ಆಮ್ ಆದ್ಮಿ ಪಕ್ಷ (ಎಎಪಿ) ಶನಿವಾರ ಹೇಳಿದೆ.

ಗುಜರಾತ್ ಸಚಿವರ ಮೇಲೆ ಶೂ ಎಸೆದಿದ್ದ ಗೋಪಾಲ್ ಇಟಾಲಿಯಾ ಈಗ ಎಎಪಿ ರಾಜ್ಯ ಉಪಾಧ್ಯಕ್ಷ
ಅರವಿಂದ್ ಕೇಜ್ರಿವಾಲ್
Published On :

ಅಹಮದಾಬಾದ್: ಮುಂದಿನ ವರ್ಷದ ಆರಂಭದಲ್ಲಿ ಗುಜರಾತ್‌ನ ಸ್ಥಳೀಯ ಸಂಸ್ಥೆಗಳಿಗೆ ನಡೆಯುವ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧಿಸುವುದಾಗಿ ಆಮ್ ಆದ್ಮಿ ಪಕ್ಷ (ಎಎಪಿ) ಶನಿವಾರ ಹೇಳಿದೆ.

ಇದೇ ವೇಳೆ, ಈ 2017ರಲ್ಲಿ ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ, ಗೃಹ ಸಚಿವ ಪ್ರದೀಪ್ ಸಿನ್ಹಾ ಜಡೇಜಾ ಅವರ ಮೇಲೆ ಶೂ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದ ಗೋಪಾಲ್ ಇಟಾಲಿಯಾ ಅವರನ್ನು ಎಎಪಿ ರಾಜ್ಯ ಉಪಾಧ್ಯಕ್ಷ(ರಾಜ್ಯ ಸಂಚಾಲಕ)ರನ್ನಾಗಿ ನೇಮಕ ಮಾಡಲಾಗಿದೆ ಎಂದು ಆಮ್ ಆದ್ಮಿ ಪಕ್ಷ ಟ್ವೀಟ್ ಮಾಡಿದೆ.

ಎಎಪಿ ಗುಜರಾತ್‌ನಲ್ಲಿ ಪರ್ಯಾಯ ಪಕ್ಷವಾಗಿ ಹೊರಹೊಮ್ಮುತ್ತಿದ್ದು, ಮುಂಬರುವ ಸ್ಥಳೀಯ ಚುನಾವಣೆಯಲ್ಲಿ ಎಲ್ಲಾ ಸ್ಥಾನಗಳಲ್ಲೂ ಸ್ಪರ್ಧಿಸಲಿದೆ. ಎಎಪಿ ಗುಜರಾತ್ ರಾಜ್ಯ ಸಂಚಾಲಕರಾಗಿ ಯುವ ಮುಖಂಡ ಗೋಪಾಲ್ ಇಟಾಲಿಯಾ ಅವರನ್ನು ನೇಮಕ ಮಾಡಲಾಗಿದೆ ಎಂದು ಎಎಪಿ ಗುಜರಾತ್ ಟ್ವೀಟ್ ಮಾಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.