ದೇಶ

ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ಏಳು ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ಉತ್ತರ ಪ್ರದೇಶದ ಮುಜಾಫರ್ ನಗರ ಜಿಲ್ಲೆಯ ಹಳ್ಳಿಯೊಂದರಲ್ಲಿ ಏಳು ವರ್ಷದ ಬಾಲಕಿಯ ಮೇಲೆ ಇಬ್ಬರು ಕಾಮುಕರು ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ಏಳು ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ
ಬೃಂದಾವನದ ಹೊರವಲಯದಲ್ಲಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಹತ್ಯೆ
Published On :

ಮುಜಾಫರ್ ನಗರ: ಉತ್ತರ ಪ್ರದೇಶದ ಮುಜಾಫರ್ ನಗರ ಜಿಲ್ಲೆಯ ಹಳ್ಳಿಯೊಂದರಲ್ಲಿ ಏಳು ವರ್ಷದ ಬಾಲಕಿಯ ಮೇಲೆ ಇಬ್ಬರು ಕಾಮುಕರು ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಬಾಲಕಿ ಕೆಲವು ಗಂಟೆಗಳ ಕಾಲ ನಾಪತ್ತೆಯಾಗಿದ್ದಳು, ನಂತರ ಆಕೆಯ ಕುಟುಂಬ ಅವಳನ್ನು ಹುಡುಕಲು ಪ್ರಾರಂಭಿಸಿತು. ಶುಕ್ರವಾರ ಸಂಜೆ ಬುಧಾನಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗ್ರಾಮದ ಹತ್ತಿರದ ಮನೆಯ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಾಲಕಿ ಪತ್ತೆಯಾಗಿದ್ದು, ರಕ್ತಸ್ರಾವ ಕಂಡುಬಂದಿದೆ ಎಂದು ಅವರು ಹೇಳಿದ್ದಾರೆ.

ಭಾರತೀಯ ದಂಡ ಸಂಹಿತೆ ಸೆಕ್ಷನ್ 376ಡಿ(ಸಾಮೂಹಿಕ ಅತ್ಯಾಚಾರ) ಮತ್ತು ಪೊಕ್ಸೊ ಕಾಯ್ದೆಯಡಿ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಗಿರಿಜಾ ಶಂಕರ್ ತ್ರಿಪಾಠಿ ತಿಳಿಸಿದ್ದಾರೆ. ಅಲ್ಲದೆ ಈ ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ಅವರು ಹೇಳಿದ್ದಾರೆ.

ಬಾಲಕಿಯನ್ನು ಹತ್ತಿರದ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಅಪ್ರಾಪ್ತ ಬಾಲಕಿಯ ತಂದೆ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.