ದೇಶ

ಹೈದರಾಬಾದ್: ಕಾರು -ಲಾರಿ ನಡುವೆ ಡಿಕ್ಕಿ, ಐವರ ದುರ್ಮರಣ

ನಗರದ ಗಚಿಬೌಲಿ ಪ್ರದೇಶದಲ್ಲಿ ಕಾರು ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ಕಾರ್‍ ನಲ್ಲಿದ್ದ ನಾಲ್ವರು ಯುವಕರು ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ಮುಂಜಾನೆ ನಡೆದಿದೆ.

ಹೈದರಾಬಾದ್: ಕಾರು -ಲಾರಿ ನಡುವೆ ಡಿಕ್ಕಿ, ಐವರ ದುರ್ಮರಣ
ಘಟನಾ ಸ್ಥಳದಲ್ಲಿ ಪೊಲೀಸರು
Published On :

ಹೈದರಾಬಾದ್: ನಗರದ ಗಚಿಬೌಲಿ ಪ್ರದೇಶದಲ್ಲಿ ಕಾರು ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ಕಾರ್‍ ನಲ್ಲಿದ್ದ ನಾಲ್ವರು ಯುವಕರು ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ಮುಂಜಾನೆ ನಡೆದಿದೆ.

ಹೈದರಾಬಾದ್‌ನ ಗಚ್ಚಿಬೌಲಿ ಬಳಿ ಕಾರಿಗೆ ಲಾರಿ ಡಿಕ್ಕಿ ಹೊಡೆದು ಐವರು ಯುವಕರು ಮೃತಪಟ್ಟಿದ್ದಾರೆ. ಸಿಗ್ನಲ್ ಜಂಪ್ ಹಾಗೂ ಅತಿಯಾದ ವೇಗವೇ ಈ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ.  

ಮೃತರನ್ನು ಸಂತೋಷ (25), ಪವನ್‌ಕುಮಾರ (24), ಪಪ್ಪು (20), ಮನೋಹರ (23), ರೋಷನ್ (23) ಎಂದು ಗುರುತಿಸಲಾಗಿದೆ.

ಮೃತಪಟ್ಟಿರುವ ಐವರೂ ಆಂಧ್ರಪ್ರದೇಶದ ವಿವಿಧ ಭಾಗಗಳಲ್ಲಿ ನೆಲೆಸಿದವರಾಗಿದ್ದಾರೆ. ಮಧ್ಯರಾತ್ರಿ 2.48ರ ಸುಮಾರಿಗೆ ಮಾರುತಿ ಸ್ವಿಫ್ಟ್ ಕಾರು ಎಪಿ ಇಡಿ 5229 ಸಂಖ್ಯೆಯ ಕಾರು ಐಐಟಿ ಜಂಕ್ಷನ್ ನಿಂದ ಬರುತ್ತಿದ್ದು. ಇದೇ ವೇಳೆ ಟಿಎಸ್ 05 ಯುಬಿ 2451 ಸಂಖ್ಯೆಯ ಭಾರೀ ಗಾತ್ರದ ಲಾರಿ ಕೊಕಪೇಟ್ ನಿಂದ ಜಂಕ್ಷನ್ ಬಳಿ ಬಂದಿದ್ದು, ಏಕಾಏಕಿ ಕಾರಿಗೆ ಡಿಕ್ಕಿ ಹೊಡೆದಿದೆ. 

ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆಂದು ತಿಳಿದುಬಂದಿದೆ. ಇನ್ನು ಲಾರಿ ಚಾಲಕನಿಗೂ ಗಂಭೀರವಾಗಿ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.