ಮಹಾರಾಷ್ಟ್ರ: ಥಾಣೆಯಲ್ಲಿ ಬೈಕ್ ಗೆ ಬಿಜೆಪಿ ಶಾಸಕನ ಕಾರು ಡಿಕ್ಕಿ, ಇಬ್ಬರು ಸಾವು
ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ಯಾಣ್ ದಲ್ಲಿ ಬಿಜೆಪಿ ಶಾಸಕರೊಬ್ಬರ ಕಾರು ಭಾನುವಾರ ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಇಬ್ಬರು ಸವಾರರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ಯಾಣ್ ದಲ್ಲಿ ಬಿಜೆಪಿ ಶಾಸಕರೊಬ್ಬರ ಕಾರು ಭಾನುವಾರ ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಇಬ್ಬರು ಸವಾರರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು ರಾತ್ರಿ 8 ಗಂಟೆ ಸುಮಾರಿಗೆ ರಾಯಟೆ- ಅಂಬರ್ನಾಥ್ ರಸ್ತೆಯ ವಹೂಲಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದ್ದು, ಮುರ್ಬಾದ್ ಬಿಜೆಪಿ ಶಾಸಕ ಕಿಸಾನ್ ಕ್ಯಾಥೋರೆ ಪ್ರಯಾಣಿಸುತ್ತಿದ್ದ ಕಾರು, ಪುರುಷ ಹಾಗೂ ಮಹಿಳೆ ತೆರಳುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಶಾಸಕ ಮತ್ತು ಅವರ ಅಂಗರಕ್ಷಕರೂ ಗಾಯಗೊಂಡಿದ್ದಾರೆ ಎಂದು ಕಲ್ಯಾಣ್ ತಾಲ್ಲೂಕು ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಪಘಾತದಲ್ಲಿ ಮೃತಪಟ್ಟ ಪುರುಷ ಹಾಗೂ ಮಹಿಳೆಯ ಹೆಸರು ಹಾಗೂ ಇತರೆ ಮಾಹಿತಿ ತಕ್ಷಣಕ್ಕೆ ಲಭ್ಯವಾಗಿಲ್ಲ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


