ದೇಶ

ಮದ್ರಾಸ್ ಐಐಟಿಯಲ್ಲಿ ವಿದ್ಯಾರ್ಥಿಗಳು ಸೇರಿ ಮತ್ತೆ 33 ಮಂದಿಗೆ ಕೊರೋನಾ ಪಾಸಿಟಿವ್

ಪ್ರತಿಷ್ಠಿತ ಮದ್ರಾಸ್ ಐಐಟಿ ಕೊರೋನಾ ಹಾಟ್ ಸ್ಪಾಟ್ ಆಗಿ ಮಾರ್ಪಡುತ್ತಿದ್ದು, ಸೋಮವಾರ ವಿದ್ಯಾರ್ಥಿಗಳು ಸೇರಿದಂತೆ ಮತ್ತೆ 33 ಮಂದಿಗೆ ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ಸಂಸ್ಥೆಯಲ್ಲಿ ಸೋಂಕಿತರ ಸಂಖ್ಯೆ 104ಕ್ಕೆ ಏರಿಕೆಯಾಗಿದೆ.

ಮದ್ರಾಸ್ ಐಐಟಿಯಲ್ಲಿ ವಿದ್ಯಾರ್ಥಿಗಳು ಸೇರಿ ಮತ್ತೆ 33 ಮಂದಿಗೆ ಕೊರೋನಾ ಪಾಸಿಟಿವ್
ಐಐಟಿ ಮದ್ರಾಸ್
Published On :

ಚೆನ್ನೈ: ಪ್ರತಿಷ್ಠಿತ ಮದ್ರಾಸ್ ಐಐಟಿ ಕೊರೋನಾ ಹಾಟ್ ಸ್ಪಾಟ್ ಆಗಿ ಮಾರ್ಪಡುತ್ತಿದ್ದು, ಸೋಮವಾರ ವಿದ್ಯಾರ್ಥಿಗಳು ಸೇರಿದಂತೆ ಮತ್ತೆ 33 ಮಂದಿಗೆ ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ಸಂಸ್ಥೆಯಲ್ಲಿ ಸೋಂಕಿತರ ಸಂಖ್ಯೆ 104ಕ್ಕೆ ಏರಿಕೆಯಾಗಿದೆ.

ತಮಿಳುನಾಡು ಆರೋಗ್ಯ ಕಾರ್ಯದರ್ಶಿ ಜೆ.ರಾಧಾಕೃಷ್ಣನ್ ಅವರು, ಇದು ಇತರ ಕಾಲೇಜುಗಳಿಗೆ ಪಾಠವಾಗಿದ್ದು,  ಕ್ಯಾಂಪಸ್‌ಗಳಲ್ಲಿ ಕೋವಿಡ್-19 ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಅನುಸರಿಸುವ ಅಗತ್ಯ ಇದೆ ಎಂದು ಒತ್ತಿ ಹೇಳಿದ್ದಾರೆ.

ಮದ್ರಾಸ್ ಐಐಟಿಯ ಸೋಂಕಿತರು ಕಿಂಗ್ಸ್ ಇನ್ಸ್ಟಿಟ್ಯೂಟ್ ಆಫ್ ಪ್ರಿವೆಂಟಿವ್ ಮೆಡಿಸಿನ್ ಅಂಡ್ ರಿಸರ್ಚ್ ಗೆ ಚಿಕಿತ್ಸೆಗಾಗಿ ದಾಖಲಾಗಿದ್ದು, ಇಂದು ಅಲ್ಲಿಗೆ ಭೇಟಿ ನೀಡಿದ ಆರೋಗ್ಯ ಕಾರ್ಯದರ್ಶಿ ರಾಧಾಕೃಷ್ಣನ್ ಅವರು, ಸಿಟಿ ಸ್ಕ್ಯಾನ್ ಮತ್ತು ರೋಗಿಗಳ ರಕ್ತದ ಮಾದರಿಯನ್ನು ಸಂಗ್ರಹಿಸಲಾಗಿದೆ ಎಂದು ತಿಳಿಸಿದ್ದಾರೆ.

"ಸೋಂಕಿತರ ಸಂಪರ್ಕಕ್ಕೆ ಬಂದವರಿಗೆ ಮಾತ್ರವಲ್ಲದೆ ಪ್ರಸ್ತುತ ಐಐಟಿಯಲ್ಲಿರುವ ಎಲ್ಲಾ 770 ಮಂದಿಗೂ ಕೋವಿಡ್ ಪರೀಕ್ಷೆಗೆ ಒಳಪಡಿಸುತ್ತಿದ್ದೇವೆ ಎಂದು ರಾಧಾಕೃಷ್ಣನ್ ಅವರು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.