ದೆಹಲಿ: ಏಮ್ಸ್ ನ ನರ್ಸ್ ಗಳಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭ
ಆಸ್ಪತ್ರೆಯ ಆಡಳಿತ ಮಂಡಳಿ ತಮ್ಮ ಬೇಡಿಕೆಗಳನ್ನು ಈಡೇರಿಸಿಲ್ಲ ಎಂದು ಆರೋಪಿಸಿ ದೆಹಲಿ ಏಮ್ಸ್ ನ ಶುಶ್ರೂಷಕಿಯರ(ನರ್ಸ್ ಗಳು) ಸಂಘ ಸೋಮವಾರದಿಂದ ಅನಿರ್ದಿಷ್ಟವಾಧಿ ಮುಷ್ಕರ ಆರಂಭಿಸುತ್ತಿರುವುದಾಗಿ ಪ್ರಕಟಿಸಿದೆ.

ನವದೆಹಲಿ: ಆಸ್ಪತ್ರೆಯ ಆಡಳಿತ ಮಂಡಳಿ ತಮ್ಮ ಬೇಡಿಕೆಗಳನ್ನು ಈಡೇರಿಸಿಲ್ಲ ಎಂದು ಆರೋಪಿಸಿ ದೆಹಲಿ ಏಮ್ಸ್ ನ ಶುಶ್ರೂಷಕಿಯರ(ನರ್ಸ್ ಗಳು) ಸಂಘ ಸೋಮವಾರದಿಂದ ಅನಿರ್ದಿಷ್ಟವಾಧಿ ಮುಷ್ಕರ ಆರಂಭಿಸುತ್ತಿರುವುದಾಗಿ ಪ್ರಕಟಿಸಿದೆ.
ಶುಶ್ರೂಷಕಿಯರು ಮುಷ್ಕರ ಘೋಷಿಸಿದ ತಕ್ಷಣ ಏಮ್ಸ್ ನಿರ್ದೇಶಕ ಡಾ ರಂದೀಪ್ ಗುಲೇರಿಯಾ ವಿಡಿಯೋ ಸಂದೇಶವನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಅವರು ಕೋವಿಡ್ ಸಂದರ್ಭದಲ್ಲಿ ದಾದಿಯರ ಕರ್ತವ್ಯವನ್ನು ನೆನಪಿಸಿಕೊಂಡಿದ್ದಾರೆ. ಆಧುನಿಕ ಶುಶ್ರೂಷೆಯ ಸಂಸ್ಥಾಪಕ ಫ್ಲಾರೆನ್ಸ್ ನೈಟಿಂಗೇಲ್ ಅವರ ಸಮರ್ಪಣೆಯನ್ನು ಅವರು ಉಲ್ಲೇಖಿಸಿದ್ದಾರೆ.
ಮುಷ್ಕರ ಕೈಬಿಡುವಂತೆ ಶುಶ್ರೂಷಕಿಯರ ಒಕ್ಕೂಟಕ್ಕೆ ಡಾ.ಗುಲೇರಿಯಾ ಅವರು ಮನವಿ ಮಾಡಿದ್ದಾರೆ.
ಈ ಮಧ್ಯೆ, ದಾದಿಯರ ಒಕ್ಕೂಟದ ಅನಿರ್ದಿಷ್ಟಾವಧಿ ಮುಷ್ಕರ ಇಂದಿನಿಂದ ಆರಂಭವಾಗಿದ್ದು, ಮುಷ್ಕರಕ್ಕೆ ಸಂಬಂಧಿಸಿದಂತೆ ಭಾನುವಾರ ನೋಟಿಸ್ ನೀಡಲಾಗಿದೆ. ಆದರೆ ಆಡಳಿತ ಮಂಡಳಿ ಇದನ್ನು ಪರಿಗಣಿಸಿಲ್ಲ ಎಂದು ಒಕ್ಕೂಟ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


