1971ರ ಯುದ್ಧದ ವೀರ ಯೋಧರ ಗೌರವಾರ್ಥ ಗಡಿಯಲ್ಲಿ 180 ಕಿ.ಮೀ. ಓಡಿದ ಬಿಎಸ್ಎಫ್ ಯೋಧರು, ವಿಡಿಯೋ!
ಬಿಎಸ್ಎಫ್ ಯೋಧರು ಗಡಿಯಲ್ಲಿ 180 ಕಿ.ಮೀ ದೂರು ಓಡುವ ಮೂಲಕ 1971ರ ಯುದ್ಧದ ವೀರ ಯೋಧರಿಗೆ ಗೌರವ ಸಲ್ಲಿಸಿದ್ದು ಈ ವಿಡಿಯೋ ವೈರಲ್ ಆಗಿದೆ. ಬಿಎಸ್ಎಫ್ ಯೋಧರ ಈ ಕಾರ್ಯಕ್ಕೆ ನೆಟ್ಟಿಗರು ಸಲಾಂ ಹೊಡೆದಿದ್ದಾರೆ.

ಶ್ರೀನಗರ: ಬಿಎಸ್ಎಫ್ ಯೋಧರು ಗಡಿಯಲ್ಲಿ 180 ಕಿ.ಮೀ ದೂರು ಓಡುವ ಮೂಲಕ 1971ರ ಯುದ್ಧದ ವೀರ ಯೋಧರಿಗೆ ಗೌರವ ಸಲ್ಲಿಸಿದ್ದು ಈ ವಿಡಿಯೋ ವೈರಲ್ ಆಗಿದೆ. ಬಿಎಸ್ಎಫ್ ಯೋಧರ ಈ ಕಾರ್ಯಕ್ಕೆ ನೆಟ್ಟಿಗರು ಸಲಾಂ ಹೊಡೆದಿದ್ದಾರೆ.
ಡಿಸೆಂಬರ್ 13ರ ಮಧ್ಯರಾತ್ರಿ 930 ಬಿಎಸ್ಎಫ್ ಸಿಬ್ಬಂದಿ ಗಡಿಯೂದ್ದಕ್ಕೂ ಬರೋಬ್ಬರಿ 180 ಕಿ.ಮೀ ದೂರವನ್ನು 11 ಗಂಟೆಯೊಳಗೆ ಓಡಿದ್ದರು. ಈ ಮೂಲಕ ವೀರ ಯೋಧರಿಗೆ ಗೌರವ ಸಲ್ಲಿಸಿದ್ದಾರೆ.
ಈ ವಿಡಿಯೋವನ್ನು ಕೇಂದ್ರ ಯುವಜನ ಸೇವಾ ಮತ್ತು ಕ್ರೀಡಾ ರಾಜ್ಯ ಸಚಿವ ಕಿರಣ್ ರಿಜಿಜು ಅವರು ಟ್ವೀಟ್ ಮಾಡಿದ್ದಾರೆ. ಈ ವಿಡಿಯೋ ನೋಡಿದ ನೆಟ್ಟಿಗರು ಯೋಧರ ಕಾರ್ಯವನ್ನು ಶ್ಲಾಘಿಸಿದ್ದಾರೆ.
1971ರ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತದ ವಿಜಯದ ನೆನಪಿಗಾಗಿ ದೇಶವೂ ಡಿಸೆಂಬರ್ 16ಕ್ಕೆ ವಿಜಯ್ ದಿವಸ್ ಅನ್ನು ಆಚರಿಸಲಾಗುತ್ತದೆ. ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಎಎ ಖಾನ್ ನಿಯಾಜಿ ಮತ್ತು 93 ಸಾವಿರ ಸೈನಿಕರು ಭಾರತೀಯ ಸೇನೆ ಮತ್ತು ಮುಕ್ತಿ ಬಹಿನಿ ಒಳಗೊಂಡ ಮಿತ್ರ ಪಡೆಗಳಿಗೆ ಬೇಷರತ್ತಾಗಿ ಶರಣಾಗಿದ್ದರು. ಈ ಯುದ್ಧದ ಅಂತ್ಯವು ಪೂರ್ವ ಪಾಕಿಸ್ತಾನವನ್ನು ಬಾಂಗ್ಲಾದೇಶ ಎಂಬ ಪ್ರತ್ಯೇಕ ರಾಷ್ಟ್ರವನ್ನಾಗಿ ಮಾಡಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


