ನಾಯಿಗೆ ಊಟ ಹಾಕಿಲ್ಲ ಎಂದು ಸಹೋದರಿಯನ್ನೇ ಗುಂಡಿಕ್ಕಿ ಹತ್ಯೆ ಮಾಡಿದ ಸಹೋದರ!
ತಾನು ಸಾಕಿದ್ದ ನಾಯಿಗಳಿಗೆ ರೋಟಿಗಳನ್ನು ಮಾಡಿ ಹಾಕಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೋರ್ವ ತನ್ನ ಸಹೋದರಿಯನ್ನೇ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ.

ಮೀರತ್: ತಾನು ಸಾಕಿದ್ದ ನಾಯಿಗಳಿಗೆ ರೋಟಿಗಳನ್ನು ಮಾಡಿ ಹಾಕಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೋರ್ವ ತನ್ನ ಸಹೋದರಿಯನ್ನೇ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ವರದಿಯಾಗಿದೆ.
ಸಹೋದರಿಯನ್ನು ಹತ್ಯೆ ಮಾಡಿದ ಬಳಿಕ ಪೊಲೀಸರಿಗೆ ಆರೋಪಿ ಆಶೀಶ್ ಶರಣಾಗಿದ್ದಾನೆ. ಪ್ರಾಣಿ ಪ್ರೇಮಿಯಾಗಿರುವ ಆಶೀಶ್, ಹಲವು ನಾಯಿಗಳನ್ನು ಸಾಕಿಕೊಂಡಿದ್ದ. ಈ ನಾಯಿಗಳಿಗೆ ಊಟ ಹಾಕಲಿಲ್ಲವೆಂದು ಕೋಪಗೊಂಡು 20 ವರ್ಷದ ಸಹೋದರಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ.
ಆಶೀಶ್ ರಿಯಲ್ ಎಸ್ಟೇಟ್ ಡೀಲರ್ ಆಗಿದ್ದು, ಪಿಸ್ತೂಲ್ ನಿಂದ ಪಾರೂಲ್ ನ ತಲೆ ಮತ್ತು ಎದೆಗೆ ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ. ಪಾರೂಲ್ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಗುಂಡಿನ ಶಬ್ದ ಕೇಳುತ್ತಿದ್ದಂತೆಯೇ ಕುಟುಂಬ ಸದಸ್ಯರು ಬಂದಿದ್ದಾರೆ. ಅಷ್ಟರಲ್ಲಿ ಪಾರೂಲ್ ರಕ್ತದ ಮಡುವಿನಲ್ಲಿ ಬಿದ್ದಿದ್ದಳು. ಸ್ವತಃ ಆಶೀಶ್ ಪೊಲೀಸರಿಗೆ ಕರೆ ಮಾಡಿ ತಿಳಿಸಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


