ದೇಶ

ಮಧ್ಯಪ್ರದೇಶ: ಡಿಸೆಂಬರ್ 18 ರಿಂದ 10 ಹಾಗೂ 12 ತರಗತಿಗೆ ಶಾಲೆಗಳು ಪುನರಾರಂಭ

10 ಹಾಗೂ 12 ತರಗತಿಯ ವಿದ್ಯಾರ್ಥಿಗಳು ಬೋರ್ಡ್ ಪರೀಕ್ಷೆಗಳಿಗೆ ಹಾಜರಾಗಬೇಕಾಗಿರುವುದರಿಂದ ಡಿಸೆಂಬರ್ 18 ರಿಂದ ಈ ತರಗತಿಗಳಿಗೆ ಪೂರ್ಣ ಪ್ರಮಾಣದ ನಿಯಮಿತ ತರಗತಿಗಳನ್ನು ನಡೆಸಲು ಮಧ್ಯಪ್ರದೇಶ ಸರ್ಕಾರ ನಿರ್ಧರಿಸಿದೆ ಎಂದು ಮಂಗಳವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಧ್ಯಪ್ರದೇಶ: ಡಿಸೆಂಬರ್ 18 ರಿಂದ 10 ಹಾಗೂ 12 ತರಗತಿಗೆ ಶಾಲೆಗಳು ಪುನರಾರಂಭ
ಸಾಂದರ್ಭಿಕ ಚಿತ್ರ
Published On :

ಭೋಪಾಲ್: 10 ಹಾಗೂ 12 ತರಗತಿಯ ವಿದ್ಯಾರ್ಥಿಗಳು ಬೋರ್ಡ್ ಪರೀಕ್ಷೆಗಳಿಗೆ ಹಾಜರಾಗಬೇಕಾಗಿರುವುದರಿಂದ ಡಿಸೆಂಬರ್ 18 ರಿಂದ ಈ ತರಗತಿಗಳಿಗೆ ಪೂರ್ಣ ಪ್ರಮಾಣದ ನಿಯಮಿತ ತರಗತಿಗಳನ್ನು ನಡೆಸಲು ಮಧ್ಯಪ್ರದೇಶ ಸರ್ಕಾರ ನಿರ್ಧರಿಸಿದೆ ಎಂದು ಮಂಗಳವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸ್ಥಳೀಯ ಮಟ್ಟದಲ್ಲಿ ಶಾಲಾ ಪ್ರಾಂಶುಪಾಲರೊಂದಿಗೆ ಚರ್ಚಿಸಿದ ನಂತರ ಮತ್ತು ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಬೋಧನಾ ಸಿಬ್ಬಂದಿಯ ಲಭ್ಯತೆಯ ಆಧಾರದ ಮೇಲೆ 9ನೇ ತರಗತಿ ಮತ್ತು 11 ತರಗತಿಗಳನ್ನು ಪುನರಾರಂಭಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿ ಹೇಳಿದ್ದಾರೆ.

ಇತ್ತೀಚಿಗೆ ಶಿಕ್ಷಣ ಸಚಿವ ಇಂದರ್ ಸಿಂಗ್ ಪರ್ಮಾರ್ ಅವರು ನಡೆಸಿದ ಪರಿಶೀಲನಾ ಸಭೆಯಲ್ಲಿ ಈ ಕುರಿತು ನಿರ್ದೇಶನಗಳನ್ನು ನೀಡಲಾಗಿದ್ದು, ಇಂದು ಶಿಕ್ಷಣ ಇಲಾಖೆ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ ಎಂದು ಅವರು ತಿಳಿಸಿದ್ದಾರೆ.

"ವಿದ್ಯಾರ್ಥಿಗಳ ಹಾಜರಾತಿ ಪೋಷಕರು ಅಥವಾ ಪಾಲಕರ ಒಪ್ಪಿಗೆಯ ಮೇಲೆ ಅವಲಂಬಿತವಾಗಿರುತ್ತದೆ. ಅವರು ನೀಡಿದ ಒಪ್ಪಿಗೆ ಈ ಶೈಕ್ಷಣಿಕ ವರ್ಷಕ್ಕೆ ಮಾನ್ಯವಾಗಿರುತ್ತದೆ. ಆದಾಗ್ಯೂ, ವಿದ್ಯಾರ್ಥಿಗಳ ಹಾಜರಾತಿ ಕಡ್ಡಾಯವಲ್ಲ. ಆನ್‌ಲೈನ್ ಮೂಲಕ ಅಧ್ಯಯನ ಮಾಡಲು ಬಯಸುವವರಿಗೆ ಅದಕ್ಕೂ ಅನುಮತಿಸಲಾಗುತ್ತದೆ" ಅಧಿಕಾರಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.