ಸರ್ದಾರ್ ವಲ್ಲಭಭಾಯಿ ಪಟೇಲ್ ಪುಣ್ಯತಿಥಿ: ಪ್ರಧಾನಿ ಮೋದಿ ಗೌರವ ನಮನ
ಭಾರತದ ಸ್ವತಂತ್ರ ಹೋರಾಟಗಾರ, ಭಾರತದ ಏಕೀಕರಣದ ಪಿತಾಮಹ. ದೇಶದ ಮೊದಲ ಕಾಂಗ್ರೆಸ್ ಸರ್ಕಾರದ ಗೃಹ ಮಂತ್ರಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪುಣ್ಯತಿಥಿ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗೌರವ ನಮನ ಸಲ್ಲಿಸಿದ್ದಾರೆ.

ನವದೆಹಲಿ: ಭಾರತದ ಸ್ವತಂತ್ರ ಹೋರಾಟಗಾರ, ಭಾರತದ ಏಕೀಕರಣದ ಪಿತಾಮಹ. ದೇಶದ ಮೊದಲ ಕಾಂಗ್ರೆಸ್ ಸರ್ಕಾರದ ಗೃಹ ಮಂತ್ರಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪುಣ್ಯತಿಥಿ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗೌರವ ನಮನ ಸಲ್ಲಿಸಿದ್ದಾರೆ.
ಬಲವಾದ ಮತ್ತು ಸಮೃದ್ಧ ಭಾರತಕ್ಕೆ ಅಡಿಪಾಯ ಹಾಕಿದ್ದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪುಣ್ಯ ತಿಥಿ ಹಿನ್ನೆಲೆಯಲ್ಲಿ ಗೌರವ ಸಲ್ಲಿಸುತ್ತಿದ್ದೇನೆ. ಸರ್ದಾರ್ ಪಟೇಲ್ ಅವರು ದೇಶದ ಏಕತೆ, ಸಮಗ್ರತೆ ಹಾಗೂ ಸಾರ್ವಭೌಮತ್ವವನ್ನು ರಕ್ಷಿಸಲು ತೋರಿಸಿಕೊಟ್ಟಿರುವ ಮಾರ್ಗ ನಮಗೆಲ್ಲರಿಗೂ ಪ್ರೇರಣೆಯಾಗಿದೆ ಎಂದು ಹೇಳಿದ್ದಾರೆ.
ಮೊದಲ ಉಪಪ್ರಧಾನಿಯೂ ಆಗಿದ್ದ ಪಟೇಲ್ ಅವರು 1950ರ ಡಿಸೆಂಬರ್ 15ರಂದು ಸಾವಿಗೀಡಾಗಿದ್ದರು. ‘ಭಾರತದ ಉಕ್ಕಿನ ಮನುಷ್ಯ’ ಎಂದೇ ಖ್ಯಾತವಾಗಿದ್ದ ಅವರು, ದೇಶದ ಎಲ್ಲಾ ರಾಜ್ಯಗಳನ್ನು ಒಂದುಗೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


