ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಆಗಮಿಸಲು ಭಾರತದ ಆಹ್ವಾನವನ್ನು ಸ್ವೀಕರಿಸಿದ ಬ್ರಿಟನ್ ಪ್ರಧಾನಿ
2021ರ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಆಗಮಿಸುವಂತೆ ಭಾರತ ನೀಡಿದ್ದ ಆಹ್ವಾನವನ್ನು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಸ್ವೀಕರಿಸಿದ್ದಾರೆ.

ನವದೆಹಲಿ: 2021ರ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಆಗಮಿಸುವಂತೆ ಭಾರತ ನೀಡಿದ್ದ ಆಹ್ವಾನವನ್ನು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಸ್ವೀಕರಿಸಿದ್ದಾರೆ.
ಬ್ರಿಟನ್ ವಿದೇಶಾಂಗ ಕಾರ್ಯದರ್ಶಿ ಡೊಮಿನಿಕ್ ರಾಬ್, ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಜೊತೆಗಿನ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯವನ್ನು ದೃಢಪಡಿಸಿದರು. ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಆಗಮಿಸುತ್ತಿರುವುದಾಗಿ ಹೇಳಿದರು.
ಜನವರಿಯಲ್ಲಿ ನಡೆಯಲಿರುವ ಭಾರತದ ಗಣರಾಜ್ಯೋತ್ಸವ ದಿನದ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳುವುದು ದೊಡ್ಡ ಗೌರವವಾಗಿದೆ. ಭಾರತದ ಆಹ್ವಾನವನ್ನು ಬ್ರಿಟನ್ ಪ್ರಧಾನಿ ಜಾನ್ಸನ್ ಸ್ವೀಕರಿಸಿದ್ದಾರೆ ಎಂದರು.
ಮುಂದಿನ ವರ್ಷ ಬ್ರಿಟನ್ ಆಯೋಜಿಸಿರುವ ಜಿ-7 ಶೃಂಗಸಭೆಯಲ್ಲಿ ಪ್ರಧಾನಿ ಮೋದಿಯನ್ನು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಆಹ್ವಾನಿಸಿರುವುದು ಅತೀವ ಸಂತೋಷವನ್ನುಂಟು ಮಾಡಿದೆ ಎಂದು ಡೊಮಿನಿಕ್ ರಾಬ್ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


