ರೈತರ ಪ್ರತಿಭಟನೆ ಬೆನ್ನಲ್ಲೇ ನಾಳೆ ಮಹತ್ವದ ಕೇಂದ್ರ ಸಚಿವ ಸಂಪುಟ ಸಭೆ
ಕೃಷಿ ಮಸೂದೆ ವಿರೋಧಿಸಿ ರೈತರು ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆಗಳನ್ನು ನಡೆಸುತ್ತಿರುವ ನಡುವಲ್ಲೇ ಬುಧವಾರ ಮಹತ್ವದ ಕೇಂದ್ರ ಸಚಿವ ಸಂಪುಟ ಸಭೆ ನಡೆಯಲಿದೆ.

ನವದೆಹಲಿ: ಕೃಷಿ ಮಸೂದೆ ವಿರೋಧಿಸಿ ರೈತರು ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆಗಳನ್ನು ನಡೆಸುತ್ತಿರುವ ನಡುವಲ್ಲೇ ಬುಧವಾರ ಮಹತ್ವದ ಕೇಂದ್ರ ಸಚಿವ ಸಂಪುಟ ಸಭೆ ನಡೆಯಲಿದೆ.
ನಾಳೆ ಬೆಳಿಗ್ಗೆ 11.25ರ ಸುಮಾರಿಗೆ ಪ್ರಧಾನಮಂತ್ರಿಗಳ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸಂಪುಟ ಸಭೆ ನಡೆಯಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಹಲವು ದಿನಗಳಿಂದಲೂ ರೈತರು ದೆಹಲಿ ಗಡಿ ಪ್ರದೇಶದಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದು, ಮಸೂದೆ ರದ್ದುಪಡಿಸುವಂತೆ ಆಗ್ರಹಿಸುತ್ತಿದ್ದಾರೆ. ಪ್ರತಿಭಟನೆ ನಡುವಲ್ಲೇ ಸಂಪುಟ ಸಭೆ ನಡೆಯುತ್ತಿರುವುದು ತೀವ್ರ ಕುತೂಹಲವನ್ನು ಮೂಡಿಸಿದೆ.
ಡಿಸೆಂಬರ್ 9 ರಂದು ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿ ಆತ್ಮನಿರ್ಭರ ಭಾರತ್ ರೋಜ್ಗಾರ್ ಯೋಜನೆಗೆ ಅನುಮೋದನೆ ನೀಡಲಾಗಿತ್ತು. ಯೋಜನೆಯೂ ಹೊಸ ಉದ್ಯೋಗಾವಕಾಶಗಳಿಗೆ ದಾರಿ ಮಾಡಿಕೊಡಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


