ರೈತರಿಗೆ ಪ್ರತಿಭಟಿಸುವ ಹಕ್ಕಿದೆ, ಆದರೆ...': ಬಿಕ್ಕಟ್ಟು ಪರಿಹಾರಕ್ಕೆ ಸಮಿತಿ ರಚಿಸಲು ಸುಪ್ರೀಂ ಕೋರ್ಟ್ ಚಿಂತನೆ
ರೈತರ ಅಹಿಂಸಾತ್ಮಕ ಪ್ರತಿಭಟನೆ ಹಕ್ಕನ್ನು ಇಂದು ಒಪ್ಪಿಕೊಂಡಿರುವ ಸುಪ್ರೀಂ ಕೋರ್ಟ್, ಮೂರು ಹೊಸ ವಿವಾದಾತ್ಮಕ ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ಉಂಟಾಗಿರುವ ಬಿಕ್ಕಟ್ಟನ್ನು ಪರಿಹರಿಸಲು ನಿಷ್ಪಕ್ಷಪಾತ ಮತ್ತು ಸ್ವತಂತ್ರ ಸಮಿತಿಯನ್ನು ಸ್ಥಾಪಿಸುವ ಬಗ್ಗೆ ಚಿಂತಿಸುತ್ತಿರುವುದಾಗಿ ಹೇಳಿದೆ.

ನವದೆಹಲಿ: ರೈತರ ಅಹಿಂಸಾತ್ಮಕ ಪ್ರತಿಭಟನೆ ಹಕ್ಕನ್ನು ಇಂದು ಒಪ್ಪಿಕೊಂಡಿರುವ ಸುಪ್ರೀಂಕೋರ್ಟ್, ಮೂರು ನೂತನ ವಿವಾದಾತ್ಮಕ ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ಉಂಟಾಗಿರುವ ಬಿಕ್ಕಟ್ಟನ್ನು ಪರಿಹರಿಸಲು ಕೃಷಿ ತಜ್ಞರು ಮತ್ತು ರೈತ ಸಂಘಗಳನ್ನೊಳಗೊಂಡ ನಿಷ್ಪಕ್ಷಪಾತ ಮತ್ತು ಸ್ವತಂತ್ರ ಸಮಿತಿಯನ್ನು ಸ್ಥಾಪಿಸುವ ಬಗ್ಗೆ ಚಿಂತಿಸುತ್ತಿರುವುದಾಗಿ ಹೇಳಿದೆ.
ಶಾಸನಗಳಿಗೆ ಸಂಬಂಧಿಸಿದ ಬಿಕ್ಕಟ್ಟನ್ನು ಪರಿಹರಿಸಲು ಪಿ. ಸಾಯಿನಾಥ್ ಅವಂತಹ ತಜ್ಞರು, ಸರ್ಕಾರದ ಪ್ರತಿನಿಧಿಗಳು ಮತ್ತು ರೈತ ಸಂಘಗಳನ್ನೊಳಗೊಂಡ ಸಮಿತಿಯನ್ನು ರಚಿಸುವುದಾಗಿ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬ್ಡೆ ನೇತೃತ್ವದ ತ್ರಿಸದಸ್ಯ ನ್ಯಾಯಪೀಠ ತಿಳಿಸಿದೆ.
ರೈತರಿಗೆ ಪ್ರತಿಭಟಿಸುವ ಹಕ್ಕಿರುವುದನ್ನು ಒಪ್ಪಿಕೊಳ್ಳುತ್ತೇವೆ ಆದರೆ, ಅದು ಅಹಿಂಸಾತ್ಮಾಕವಾಗಿರಬೇಕು ಎಂದು ಎಸ್.ಎ ಬೊಪ್ಪಣ್ಣ, ವಿ. ರಾಮಸುಬ್ರಮಣಿಯನ್ ಅವರನ್ನೊಳಗೊಂಡ ನ್ಯಾಯಪೀಠ ಹೇಳಿತು.
ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದ ಉನ್ನತ ನ್ಯಾಯಾಲಯ, ಒಂದು ವೇಳೆ ರೈತರು ಮತ್ತು ಸರ್ಕಾರದ ನಡುವೆ ಮಾತುಕತೆ ನಡೆದರೆ ಪ್ರತಿಭಟನೆಯ ಉದ್ದೇಶದ ಗುರಿ ಸಾಧಿಸಿದಂತಾಗುತ್ತದೆ. ನಾವು ಸಮಸ್ಯೆಯನ್ನು ಬಗೆಹರಿಸಬಹುದು ಎಂದಿತು.
ನಾವು ಇಂದು ಕಾನೂನಿನ ಸಿಂಧುತ್ವವನ್ನು ನಿರ್ಧರಿಸುವುದಿಲ್ಲ. ಪ್ರತಿಭಟನೆಯ ವಿಷಯ ಮತ್ತು ಮುಕ್ತವಾಗಿ ನಡೆಯುವುದನ್ನು ಮಾತ್ರ ನಾವು ನಿರ್ಧರಿಸುತ್ತೇವೆ ಎಂದು ವಿಚಾರಣೆಯ ಪ್ರಾರಂಭದಲ್ಲಿ ನ್ಯಾಯಪೀಠ ಸ್ಪಷ್ಟಪಡಿಸಿತು. ವಿಚಾರಣೆ ಇನ್ನೂ ನಡೆಯುತ್ತಿದೆ.
ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯನ್ನು ನಿಲ್ಲಿಸುವಂತೆ ಕೋರಿ ಸಲ್ಲಿಸಲಾಗಿರುವ ಹಲವು ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ ನಡೆಸುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


