ಸಂಸದೀಯ ಸಮಿತಿ ಸಭೆಯಲ್ಲಿ ಮಾತನಾಡಲು ಅವಕಾಶ ನಿರಾಕರಣೆ: ಸ್ಪೀಕರ್ ಗೆ ಪತ್ರ ಬರೆದ ರಾಹುಲ್ ಗಾಂಧಿ
ರಕ್ಷಣಾ ಸಂಸದೀಯ ಸಮಿತಿಯ ಸಭೆಯಲ್ಲಿ ಮುಕ್ತವಾಗಿ ಮಾತನಾಡಲು ಅವಕಾಶ ನೀಡಿಲ್ಲ ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಗುರುವಾರ ಪತ್ರ ಬರೆದಿದ್ದು, ತಮ್ಮ ಮಧ್ಯಪ್ರವೇಶವನ್ನು ಬಯಸಿದ್ದಾರೆ ಎಂದು ಮೂಲಗಳು ಹೇಳಿವೆ.

ನವದೆಹಲಿ: ರಕ್ಷಣಾ ಸಂಸದೀಯ ಸಮಿತಿಯ ಸಭೆಯಲ್ಲಿ ಮುಕ್ತವಾಗಿ ಮಾತನಾಡಲು ಅವಕಾಶ ನೀಡಿಲ್ಲ ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಗುರುವಾರ ಪತ್ರ ಬರೆದಿದ್ದು, ತಮ್ಮ ಮಧ್ಯಪ್ರವೇಶವನ್ನು ಬಯಸಿದ್ದಾರೆ ಎಂದು ಮೂಲಗಳು ಹೇಳಿವೆ.
ಸಂಸದೀಯ ಸಮಿತಿ ಸಭೆಗಳಲ್ಲಿ ಚುನಾಯಿತ ಸಂಸದರು ಮುಕ್ತವಾಗಿ ಮಾತನಾಡುವ ಹಕ್ಕನ್ನು ಕಾಪಾಡುವಂತೆ ನೋಡಿಕೊಳ್ಳಬೇಕೆಂದು ಗಾಂಧಿ ತಮ್ಮ ಪತ್ರದಲ್ಲಿ ಸ್ಪೀಕರ್‌ಗೆ ಒತ್ತಾಯಿಸಿದ್ದಾರೆ.
ಸಂಸತ್ತಿನ ಉಸ್ತುವಾರಿ ಆಗಿರುವ ಸ್ಪೀಕರ್, ರಕ್ಷಣಾ ಸಮಿತಿಯಲ್ಲಿನ ಚರ್ಚೆಗಳು ಮತ್ತು ಪ್ರಸ್ತುತಿಗಳು ಸಂಸತ್ತಿನ ಪಾತ್ರ ಮತ್ತು ಉದ್ದೇಶಗಳಿಗೆ ಅನುಗುಣವಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.
ದೇಶದ ಭದ್ರತೆಗೆ ಸಂಬಂಧಪಟ್ಟ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಸದೆ ಸೇನಾಪಡೆಯ ಸಿಬ್ಬಂದಿಯ ಸಮವಸ್ತ್ರದ ಬಗ್ಗೆ ಚರ್ಚಿಸಿ ಸಮಯ ಹಾಳು ಮಾಡಲಾಗುತ್ತಿದ್ದೀರಿ ಎಂದು ರಾಹುಲ್ ಗಾಂಧಿ ಮತ್ತು ಇತರ ನಾಯಕರು ರಕ್ಷಣಾ ಸಮಿತಿ ಸಭೆಯಿಂದ ಬುಧವಾರ ಹೊರ ನಡೆದಿದ್ದರು.
ಲಡಾಖ್ ಗಡಿ ಪ್ರದೇಶದಲ್ಲಿ ಸೈನಿಕರ ಸಜ್ಜು ಮತ್ತು ಚೀನಾದಿಂದ ಆಕ್ರಮಣ ವಿಚಾರ ಕುರಿತು ರಾಹುಲ್ ಗಾಂಧಿ ಬಯಸಿದ್ದಾಗ ಸಂಸದೀಯ ಸಮಿತಿ ಸಭೆ ಅಧ್ಯಕ್ಷ ಜುಯಲ್ ಓರಮ್ ಮಾತನಾಡಲು ಅವಕಾಶ ನಿರಾಕರಿಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಸ್ಥಾಯಿ ಸಮಿತಿಯ ಉದ್ದೇಶವನ್ನು ಎತ್ತಿ ತೋರಿಸುವುದು ಸದಸ್ಯರ ಹಕ್ಕು. ನಾನು ಹೇಳುವುದನ್ನು ಸಮಿತಿ ಒಪ್ಪುವುದಿಲ್ಲ, ಆದರೆ, ಸಮಿತಿ ಅಧ್ಯಕ್ಷರು ಸದಸ್ಯರಿಗೆ ಮಾತನಾಡಲು ಅವಕಾಶ ನೀಡುವುದಿಲ್ಲ ಎಂಬ ಅಂಶವು ಸರ್ಕಾರ ಮಿಲಿಟರಿ ವ್ಯವಹಾರಗಳನ್ನು ಹೇಗೆ ನಿರ್ವಹಿಸುತ್ತಿದೆ ಎಂಬುದರ ಬಗ್ಗೆ ವಿಷಾಧವನ್ನುಂಟು ಮಾಡಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


