ಬಂಡಾಯ ಕಾಂಗ್ರೆಸ್ ನಾಯಕರೊಂದಿಗೆ ಶನಿವಾರ ಸೋನಿಯಾ ಗಾಂಧಿ ಸಭೆ
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಈ ವಾರಾಂತ್ಯಕ್ಯೆ ಪಕ್ಷದ ಬಂಡಾಯ ನಾಯಕರನ್ನು ಮುಖಾಮುಖಿ ಭೇಟಿ ಮಾಡಲು ನಿರ್ಧರಿಸಿದ್ದು, ಪಕ್ಷ ಸಂಘಟನೆ ಹಾಗೂ ತಮ್ಮ ನಾಯಕತ್ವ ಪ್ರಶ್ನಿಸಿ ಬರೆದಿದ್ದ ಪತ್ರದ ಬಗ್ಗೆಯೂ ಚರ್ಚಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಈ ವಾರಾಂತ್ಯಕ್ಯೆ ಪಕ್ಷದ ಬಂಡಾಯ ನಾಯಕರನ್ನು ಮುಖಾಮುಖಿ ಭೇಟಿ ಮಾಡಲು ನಿರ್ಧರಿಸಿದ್ದು, ಪಕ್ಷ ಸಂಘಟನೆ ಹಾಗೂ ತಮ್ಮ ನಾಯಕತ್ವ ಪ್ರಶ್ನಿಸಿ ಬರೆದಿದ್ದ ಪತ್ರದ ಬಗ್ಗೆಯೂ ಚರ್ಚಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪಕ್ಷ ಸಂಘಟನೆಗೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು ಸೋನಿಯಾ ಗಾಂಧಿಯವರು ಕಾಂಗ್ರೆಸ್ ಮುಖಂಡರೊಂದಿಗೆ ಡಿಸೆಂಬರ್ 19 ಮತ್ತು 20 ರಂದು ಸರಣಿ ಸಭೆಗಳನ್ನು ನಿಗದಿಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಧ್ಯ ಪ್ರದೇಶ ಮಾಜಿ ಮುಖ್ಯಮಂತ್ರಿ ಕಮಲ್‌ನಾಥ್ ಹಾಗೂ ಸೋನಿಯಾ ಗಾಂಧಿ ಅವರ ಪುತ್ರ ರಾಹುಲ್ ಗಾಂಧಿಯೂ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ.
ಪಕ್ಷದ ಗಣನೀಯ ಕುಸಿತದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದ ಹಾಗೂ ಸಕ್ರಿಯ ನಾಯಕತ್ವಕ್ಕೆ ಒತ್ತಾಯಿಸಿದ್ದ ಭಿನ್ನಮತೀಯರನ್ನು ಕಮಲ್‌ನಾಥ್ ಒಂದುಗೂಡಿಸಿದ್ದಾರೆ ಎಂದು ತಿಳಿದು ಬಂದಿದೆ. ಕಮಲ್‌ನಾಥ್ ಅವರೇ ಮುಂದೆ ನಿಂತು, ಪತ್ರ ಬರೆದಿದ್ದ ಭಿನ್ನಮತೀಯ ನಾಯಕರನ್ನು ಭೇಟಿಯಾಗುವಂತೆ ಸೋನಿಯಾ ಗಾಂಧಿ ಅವರನ್ನು ಮನವೊಲಿಸಿದರು ಎಂದು ಮೂಲಗಳು ಹೇಳಿವೆ.
ಬಿಹಾರ ವಿಧಾನಸಭೆ ಚುನಾವಣೆಯಲ್ಲಿಯೂ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಿದ್ದ ಮತ್ತೆ ಅಸಮಧಾನ ಬುಗಿಲ್ಲೆದ್ದಿತ್ತು. ಹಿರಿಯ ನಾಯಕ ಕಪಿಲ್ ಸಿಬಲ್ ಅವರಂತೂ ಆತ್ಮಾವಲೋಕನದ ಸಮಯ ಮುಗಿದಿದೆ ಎಂದು ಬಹಿರಂಗವಾಗಿ ಹೇಳಿದ್ದರು. ಪಿ ಚಿದಂಬರಂ ಅವರೂ ‘ಸಮಗ್ರ ವಿಮರ್ಶೆ’ ಅಗತ್ಯವಿದೆ ಎಂದು ಹೇಳಿದ್ದಲ್ಲದೆ, ಪಕ್ಷವನ್ನು ಮೂಲದಲ್ಲಿ ಬಲಪಡಿಸಬೇಕಾಗಿದೆ ಎಂದು ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


