ಪ್ಲಾನ್ ಇಲ್ಲದ 21 ದಿನಗಳ ಲಾಕ್ ಡೌನ್ ನಿಂದ ದೇಶದ ಜನರ ಜೀವನ ನಾಶವಾಯಿತು: ರಾಹುಲ್ ಗಾಂಧಿ
ಪ್ರಧಾನಿ ನರೇಂದ್ರ ಮೋದಿ ಅವರ ಯೋಜಿತವಲ್ಲದ ಲಾಕ್‌ಡೌನ್ ಫಲಿಸಲಿಲ್ಲ. ಬದಲಿಗೆ ಅದು ಲಕ್ಷಾಂತರ ಜನರ ಜೀವನವನ್ನು ನಾಶಪಡಿಸಿತು’ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶನಿವಾರ ಆರೋಪಿಸಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಯೋಜಿತವಲ್ಲದ ಲಾಕ್‌ಡೌನ್ ಫಲಿಸಲಿಲ್ಲ. ಬದಲಿಗೆ ಅದು ಲಕ್ಷಾಂತರ ಜನರ ಜೀವನವನ್ನು ನಾಶಪಡಿಸಿತು’ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶನಿವಾರ ಆರೋಪಿಸಿದ್ದಾರೆ.
‘ಮಹಾಭಾರತದಲ್ಲಿ ಯುದ್ಧವನ್ನು 18 ದಿನಗಳಲ್ಲಿ ಗೆಲ್ಲಲಾಗಿತ್ತು. ಕೊರೊನಾ ವೈರಸ್ ವಿರುದ್ಧದ ಯುದ್ಧವನ್ನು ಗೆಲ್ಲಲು 21 ದಿನಗಳು ಬೇಕು’ ಎಂದು ಮಾರ್ಚ್‌ನಲ್ಲಿ ಪ್ರಧಾನಿ ಅವರು ನೀಡಿದ್ದ ಹೇಳಿಕೆಯನ್ನು ಟೀಕಿಸಿ ಅವರು ಟ್ವೀಟ್ ಮಾಡಿದ್ದಾರೆ.
ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಶನಿವಾರ ಒಂದು ಕೋಟಿ ಗಡಿ ದಾಟಿದ್ದು, ಸುಮಾರು 1.5 ಲಕ್ಷ ಜನರು ಕೋವಿಡ್‌ನಿಂದಾಗಿ ಸಾವನ್ನಪ್ಪಿದ್ದು, 1 ಕೋಟಿ ಜನರಲ್ಲಿ ಕೋವಿಡ್ ದೃಢಪಟ್ಟಿದೆ. ನಿಮ್ಮ ಯೋಜಿತವಲ್ಲದ ಲಾಕ್‌ಡೌನ್‌ನಿಂದಾಗಿ 21 ದಿನಗಳಲ್ಲಿ ಯುದ್ಧವನ್ನು ಗೆಲ್ಲಲು ಆಗಲಿಲ್ಲ. ಆದರೆ, ಇದು ಖಂಡಿತವಾಗಿಯೂ ದೇಶದ ಲಕ್ಷಾಂತರ ಜೀವನಕ್ಕೆ ಎರವಾಗಿದೆ’ ಎಂದು ಅವರು ದೂರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


