ಜನವರಿಯಿಂದಲೇ ಭಾರತದಲ್ಲಿ ಕೊರೋನಾ ಲಸಿಕೆ ನೀಡಲು ಪ್ರಾರಂಭಿಸಬಹುದು: ಸಚಿವ ಹರ್ಷವರ್ಧನ್
ಭಾರತದಲ್ಲಿ ಜನವರಿಯಿಂದ ದೇಶದ ಜನತೆಗೆ ಲಸಿಕೆ ನೀಡಲು ಪ್ರಾರಂಭಿಸಬಹುದು. ಕೇಂದ್ರ ಸರ್ಕಾರದ ಮೊದಲ ಆದ್ಯತೆ ಲಸಿಕೆಯ ಸುರಕ್ಷತೆ ಮತ್ತು ಪರಿಣಾಮಕಾರಿತ್ವ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ.

ನವದೆಹಲಿ: ಭಾರತದಲ್ಲಿ ಜನವರಿಯಿಂದ ದೇಶದ ಜನತೆಗೆ ಲಸಿಕೆ ನೀಡಲು ಪ್ರಾರಂಭಿಸಬಹುದು. ಕೇಂದ್ರ ಸರ್ಕಾರದ ಮೊದಲ ಆದ್ಯತೆ ಲಸಿಕೆಯ ಸುರಕ್ಷತೆ ಮತ್ತು ಪರಿಣಾಮಕಾರಿತ್ವ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ.
ನಾನು ವೈಯಕ್ತಿಕವಾಗಿ ಜನವರಿಯಿಂದ ಯಾವುದೇ ಹಂತದಲ್ಲಿ ಅಥವಾ ಯಾವುದೇ ವಾರದಿಂದಾಗಲಿ ದೇಶದ ಜನರಿಗೆ ಕೊರೋನಾ ಲಸಿಕೆ ಶಾಟ್ ನೀಡಬಹುದು ಎಂದು ಹರ್ಷ್ ವರ್ಧನ್ ಎಎನ್‌ಐಗೆ ವಿಶೇಷ ಸಂದರ್ಶನದಲ್ಲಿ ತಿಳಿಸಿದರು.
ಕೊರೋನಾವೈರಸ್ ವಿರುದ್ಧ ಭಾರತದಲ್ಲಿ ವ್ಯಾಕ್ಸಿನೇಷನ್ ಚಾಲನೆಯ ಬಗ್ಗೆ ಕೇಳಿದಾಗ, ತುರ್ತು ಬಳಕೆಯ ದೃಢಿಕರಣಕ್ಕಾಗಿ ಅರ್ಜಿ ಸಲ್ಲಿಸಿದವರು ಸೇರಿದಂತೆ ಲಸಿಕೆಗಳನ್ನು ನಿಯಂತ್ರಕದಿಂದ ವಿಶ್ಲೇಷಿಸಲಾಗುತ್ತಿದೆ ಎಂದು ಸಚಿವರು ಹೇಳಿದರು.
ಕೋವಿಡ್ 19 ಲಸಿಕೆ ಮತ್ತು ಸಂಶೋಧನೆಗೆ ಸಂಬಂಧಿಸಿದಂತೆ ಭಾರತವು ಯಾವುದೇ ದೇಶಕ್ಕಿಂತ ಕಡಿಮೆಯಿಲ್ಲ. ಲಸಿಕೆಯ ಸುರಕ್ಷತೆ ಮತ್ತು ಪರಿಣಾಮಕಾರಿತ್ವವೇ ನಮ್ಮ ಮೊದಲ ಆದ್ಯತೆ. ಅದರಲ್ಲಿ ಯಾವುದೆಲ್ಲ ಒಳಗೊಂಡಿರಬೇಕೆಂದು ನಾವು ಬಯಸುವುದಿಲ್ಲ. ನಮ್ಮ ನಿಯಂತ್ರಕರು ಅವುಗಳನ್ನು ಗಂಭೀರತೆಯಿಂದ ವಿಶ್ಲೇಷಿಸುತ್ತಿದ್ದಾರೆ ಎಂದರು.
ದೇಶದ ಲಸಿಕೆ ಅಭಿವೃದ್ಧಿಪಡಿಸುವಲ್ಲಿ ದೇಶದ ವಿಜ್ಞಾನಿಗಳು ಮತ್ತು ಆರೋಗ್ಯ ತಜ್ಞರು ಕೆಲಸ ಮಾಡಿದ್ದಾರೆ ಮತ್ತು ಮುಂಬರುವ ಆರರಿಂದ ಏಳು ತಿಂಗಳಲ್ಲಿ ಸುಮಾರು 30 ಕೋಟಿ ಜನರಿಗೆ ಚುಚ್ಚುಮದ್ದು ನೀಡುವ ಸಾಮರ್ಥ್ಯವನ್ನು ಭಾರತ ಹೊಂದಿದೆ ಎಂದು ಹರ್ಷವರ್ಧನ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


