ಬಿಹಾರ ಮಾಜಿ ಸಿಎಂ ಲಾಲು ಪ್ರಸಾದ್ ಆರೋಗ್ಯ ಕ್ಷೀಣ; ಶೇ.25ರಷ್ಟು ಮಾತ್ರ ಕಿಡ್ನಿ ಕಾರ್ಯ ನಿರ್ವಹಣೆ
ಆರ್ ಜೆಡಿ ಮುಖ್ಯಸ್ಥ ಹಾಗೂ ಬಿಹಾರದ ಮಾಜಿ ಸಿಎಂ, ಮಾಜಿ ಕೇಂದ್ರ ಸಚಿವ ಲಾಲು ಪ್ರಸಾದ್ ಯಾದವ್ ಅವರ ಆರೋಗ್ಯ ಮತ್ತಷ್ಟು ಕ್ಷೀಣವಾಗಿದ್ದು, ಅವರ ಕಿಡ್ನಿಯ ಶೇ.25ರಷ್ಟು ಭಾಗ ಮಾತ್ರ ಕಾರ್ಯ ನಿರ್ವಹಿಸುತ್ತಿದೆ ಎಂದು ಹೇಳಲಾಗಿದೆ.

ಪಾಟ್ನಾ: ಆರ್ ಜೆಡಿ ಮುಖ್ಯಸ್ಥ ಹಾಗೂ ಬಿಹಾರದ ಮಾಜಿ ಸಿಎಂ, ಮಾಜಿ ಕೇಂದ್ರ ಸಚಿವ ಲಾಲು ಪ್ರಸಾದ್ ಯಾದವ್ ಅವರ ಆರೋಗ್ಯ ಮತ್ತಷ್ಟು ಕ್ಷೀಣವಾಗಿದ್ದು, ಅವರ ಕಿಡ್ನಿಯ ಶೇ.25ರಷ್ಟು ಭಾಗ ಮಾತ್ರ ಕಾರ್ಯ ನಿರ್ವಹಿಸುತ್ತಿದೆ ಎಂದು ಹೇಳಲಾಗಿದೆ.
ಈ ಬಗ್ಗೆ ಸ್ವತಃ ಲಾಲು ಪ್ರಸಾದ್ ಅವರ ಪುತ್ರ ತೇಜಸ್ವಿ ಯಾದವ್ ಅವರ ಪುತ್ರ ಮಾಹಿತಿ ನೀಡಿದ್ದು, ಬಿಹಾರದ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. 'ಲಾಲು ಪ್ರಸಾದ್ ಯಾದವ್ ಅವರ ಕಿಡ್ನಿಗಳು ಶೇ.25ರಷ್ಟು ಮಾತ್ರ ಕಾರ್ಯ ನಿರ್ವಹಿಸುತ್ತಿವೆ. ಅವರು ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚುನಾವಣೆಯಲ್ಲಿ ಕಾರ್ಯನಿರತನಾಗಿದ್ದ ನಾನು ಕಳೆದ 4-5 ತಿಂಗಳಿನಿಂದ ಅವರನ್ನು ಭೇಟಿ ಮಾಡಿರಲಿಲ್ಲ. ಹೀಗಾಗಿ ಇಂದು ಅವರನ್ನು ಭೇಟಿ ಮಾಡಲು ಬಂದಿದ್ದೇನೆ. ಚುನಾವಣೆ ಬಳಿಕ ಇದೇ ಮೊದಲ ಬಾರಿಗೆ ಲಾಲು ಪ್ರಸಾದ್ ಯಾದವ್ ಅವರನ್ನು ಭೇಟಿ ಮಾಡುತ್ತಿದ್ದೇನೆ ಎಂದು ಹೇಳಿದರು.
ಇನ್ನು ಪ್ರಸ್ತುತ ಲಾಲು ಪ್ರಸಾದ್ ಯಾದವ್ ಅವರ ಆರೋಗ್ಯ ಸ್ಥಿರವಾಗಿದೆ. ತಂದೆಯವರ ಆರೋಗ್ಯದ ಕುರಿತು ನಾವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕಾಗಿದೆ. ರಿಮ್ಸ್ ವೈದ್ಯರೊಂದಿಗೆ ಮಾತ್ರವಲ್ಲದೆ ದೆಹಲಿಯ ಕೆಲವು ಪ್ರಖ್ಯಾತ ವೈದ್ಯರು ಮತ್ತು ನಮ್ಮ ಕುಟುಂಬ ವೈದ್ಯರೊಂದಿಗೆ ಮಾತನಾಡುತ್ತಿದ್ದೇವೆ. ಮೂತ್ರಪಿಂಡಗಳ ಕಾರ್ಯನಿರ್ವಹಣೆ ಶೇ 25ಕ್ಕೆ ಕುಸಿದಿದೆ. ಇದು ಗಂಭೀರವಾದ ಪರಿಸ್ಥಿತಿ. ಹೀಗಾಗಿ ಲಾಲು ಅವರನ್ನು ಭೇಟಿ ಮಾಡಲು ವೈದ್ಯರೊಂದಿಗೆ ಮನವಿ ಮಾಡಿದ್ದೆವು ಎಂದು ತೇಜಸ್ವಿ ಹೇಳಿದ್ದಾರೆ.
ಇನ್ನು ಬಿಹಾರ ಚುನಾವಣೆಯಲ್ಲಿ ಕೆಲವೇ ಸ್ಥಾನಗಳ ಅಂತರದಲ್ಲಿ ಮಹಾಘಟ್ ಬಂದನ್ ಅಧಿಕಾರದಿಂದ ದೂರ ಉಳಿಯುವಂತಾಗಿತ್ತು. ಈ ಬೆಳವಣಿಗೆ ಬಳಿಕ ಇದೇ ಮೊದಲ ಬಾರಿಗೆ ತೇಜಸ್ವಿ ಯಾದವ್ ಅವರು ಲಾಲು ಪ್ರಸಾದ್ ಅವರನ್ನು ಭೇಟಿ ಮಾಡಿದ್ದಾರೆ.
ಇತ್ತೀಚೆಗಷ್ಟೇ ಲಾಲು ಪ್ರಸಾದ್ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರೊಬ್ಬರು ಲಾಲು ಪ್ರಸಾದ್ ಅವರ ಕಿಡ್ನಿಗಳು ಶೇ.25ರಷ್ಟು ಮಾತ್ರ ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


