ಉದ್ಯಮಿ ಕೊಲೆಗಾಗಿ ಐಶಾರಾಮಿ ಹೊಟೆಲ್ ಗೆ ಬಂದ ದುಷ್ಕರ್ಮಿಗಳಿಂದ ಮಹಿಳಾ ಸಿಬ್ಬಂದಿ ಮೇಲೆ ಗ್ಯಾಂಗ್ ರೇಪ್!
ಉದ್ಯಮಿಯೋರ್ವನನ್ನು ಕೊಲೆಗೈಯ್ಯಲು ಐಶಾರಾಮಿ ಹೊಟೆಲ್ ನಲ್ಲಿ ತಂಗಿದ್ದ ಸುಪಾರಿ ಕಿಲ್ಲರ್ಸ್ ಹೊಟೆಲ್ ನ ಮಹಿಳಾ ಸಿಬ್ಬಂದಿಗಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.

ಜೈಪುರ: ಉದ್ಯಮಿಯೋರ್ವನನ್ನು ಕೊಲೆಗೈಯ್ಯಲು ಐಶಾರಾಮಿ ಹೊಟೆಲ್ ನಲ್ಲಿ ತಂಗಿದ್ದ ಸುಪಾರಿ ಕಿಲ್ಲರ್ಸ್ ಹೊಟೆಲ್ ನ ಮಹಿಳಾ ಸಿಬ್ಬಂದಿಗಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.
ರಾಜಸ್ಥಾನದ ನೀಮಾನಾದಲ್ಲಿ ಈ ಘಟನೆ ನಡೆದಿದ್ದು, ಸ್ಟಾರ್ ಹೋಟೆಲ್ ವೊಂದರಲ್ಲಿ ತಂಗಿದ್ದ ಐದು ಮಂದಿ ಇಬ್ಬರು ಹೋಟೆಲ್ ಮಹಿಳಾ ಸಿಬ್ಬಂದಿಗಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಮೂಲಗಳ ಪ್ರಕಾರ ಇಲ್ಲಿನ ಐಶಾರಾಮಿ ಹೊಟೆಲ್ ವೊಂದಕ್ಕೆ ಆಗಮಿಸಿದ್ದ ಐವರು ದುಷ್ಕರ್ಮಿಗಳು ಕೊಠಡಿಯನ್ನು ಪಡೆದಿದ್ದಾರೆ. ಈ ವೇಳೆ ರೂಮ್ ಕೀಯನ್ನು ತೆಗೆದುಕೊಂಡ ದುಷ್ಕರ್ಮಿಗಳು ಕೆಲವೇ ಕ್ಷಣಗಳಲ್ಲಿ ರಿಸಪ್ಷನ್ ಗೆ ಕರೆ ಮಾಡಿ ಸೆಕ್ಸ್ ವರ್ಕರ್ ಗಳನ್ನು ರೂಮ್‌ಗೆ ಕಳುಹಿಸುವಂತೆ ಹೇಳಿದ್ದಾರೆ. ಇದಕ್ಕೆ ಹೋಟೆಲ್ ಸಿಬ್ಬಂದಿ ನಿರಾಕರಿಸಿದ್ದಾರೆ.
ಇದರಿಂದ ಸಿಟ್ಟಿಗೆದ್ದ ಆರೋಪಿಗಳು ನೇರವಾಗಿ ಮಹಿಳಾ ಸಿಬ್ಬಂದಿ ಮಲಗಿದ್ದ ಕೋಣೆ ಕಡೆಗೆ ಹೋಗಿದ್ದಾರೆ. ಇಬ್ಬರು ಒಳಗೆ ಹೋಗಿದ್ದಾರೆ. ಮೂವರು ಹೊರಗೆ ಕಾವಲು ಕಾಯಲು ನಿಂತಿದ್ದಾರೆ. ಒಳಗೆ ಹೋದ ಆರೋಪಿಗಳು ಮಹಿಳಾ ಸಿಬ್ಬಂದಿಗಳಿಗೆ ಪಿಸ್ತೂಲು ತೋರಿಸಿ, ಇಬ್ಬರ ಮೇಲೆ ಅತ್ಯಾಚಾರವೆಸಗಿದ್ದಾರೆ. ಕೂಡಲೇ ಎಚ್ಚೆತ್ತ ಹೋಟೆಲ್ ಮ್ಯಾನೇಜರ್ ಪೊಲೀಸರಿಗೆ ವಿಚಾರ ತಿಳಿಸಿದ್ದಾರೆ.
ಪೊಲೀಸರ ವಿಶೇಷ ತಂಡ ಸ್ಥಳಕ್ಕೆ ಬಂದು ಮಹಿಳಾ ಸಿಬ್ಬಂದಿಯನ್ನು ರಕ್ಷಿಸಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ನರೇಶ್ ಗುಜ್ಜರ್, ಲೋಕೇಶ್, ರಾಹುಲ್, ದನ್ವೇರ್ ಮತ್ತು ಪ್ರಿನ್ಸ್ ತಿವಾರಿ ಎಂದು ಗುರುತಿಸಲಾಗಿದೆ.ಈ ವೇಳೆ ವಿಚಾರಣೆ ನಡೆಸಿದ ಪೊಲೀಸರಿಗೆ ದುಷ್ಕರ್ಮಿಗಳು ಸ್ಫೋಟಕ ಮಾಹಿತಿ ನೀಡಿದ್ದು, ತಾವು ಓರ್ವ ಉದ್ಯಮಿಯನ್ನು ಹತ್ಯೆ ಮಾಡುವ ಸಲುವಾಗಿ ಬಂದಿದ್ದಾಗಿ ತಿಳಿಸಿದ್ದಾರೆ. ಹತ್ಯೆ ಮಾಡದೇ ಇರಲು ಉದ್ಯಮಿಗೆ 20 ಲಕ್ಷ ರೂ ನೀಡುವಂತೆ ಬೇಡಿಕೆ ಇಟ್ಟಿದ್ದರು. ಕೊಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರಂತೆ. ಈ ಐವರು ಆರೋಪಿಗಳಲ್ಲಿ ಒಬ್ಬನಾದ ನರೇಶ್ ಈಗಾಗಲೇ ಒಂದು ಕೊಲೆ ಆರೋಪವನ್ನು ಹೊತ್ತಿದ್ದು, ಪೆರೋಲ್ ಮೇಲೆ ಜೈಲಿನಿಂದ ಹೊರಗಡೆ ಬಂದಿದ್ದ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


