ಪ್ರತಿಭಟನಾನಿರತ ರೈತರ ಸ್ಥಿತಿಗೆ ಮರುಗಿದ ಬಾಲಿವುಡ್ ನಟ: ಇದಕ್ಕಾಗಿ 1 ಕೋಟಿ ರೂ. ನೆರವು ಘೋಷಣೆ!
ಕೊರೆಯುವ ಚಳಿಯ ನಡುವೆಯೂ ಕೇಂದ್ರದ ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿರುವ ಗಾಜಿಪುರ ಗಡಿಯಲ್ಲಿನ ಪ್ರತಿಭಟನಾ ಸ್ಥಳಕ್ಕೆ ಇಂದು ಭೇಟಿ ನೀಡಿದ ಬಾಲಿವುಡ್ ಹಾಗೂ ಪಂಜಾಬ್ ನಟ, ಸಂಗೀತಗಾರ ದಿಲ್ಜಿತ್ ದೋಸಾಂಜ್, ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದರು.

ನವದೆಹಲಿ: ಕೊರೆಯುವ ಚಳಿಯ ನಡುವೆಯೂ ಕೇಂದ್ರದ ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿರುವ ಗಾಜಿಪುರ ಗಡಿಯಲ್ಲಿನ ಪ್ರತಿಭಟನಾ ಸ್ಥಳಕ್ಕೆ ಇಂದು ಭೇಟಿ ನೀಡಿದ ಬಾಲಿವುಡ್ ಹಾಗೂ ಪಂಜಾಬ್ ನಟ, ಸಂಗೀತಗಾರ ದಿಲ್ಜಿತ್ ದೋಸಾಂಜ್, ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದರು.
ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ದಿಲ್ಜಿತ್ ದೋಸಾಂಜ್, ಪ್ರತಿಭಟನಾಕಾರರಿಗಾಗಿ ಬೆಚ್ಚನೆಯ ಉಡುಪು ಖರೀದಿಗೆ 1 ಕೋಟಿ ರೂ. ನೆರವು ನೀಡುವುದಾಗಿ ಹೇಳಿದರು.
ಈ ವಾರದ ಆರಂಭದಲ್ಲಿ ರೈತರ ಪ್ರತಿಭಟನೆ ಕುರಿತು ಟ್ವೀಟ್ ಮಾಡಿದ್ದ ಬಾಲಿವುಡ್ ನಟಿ ಕಂಗನಾ ರಣಾವತ್ ಅವರಿಗೆ ದಿಲ್ಜಿತ್ ದೋಸಾಂಜ್ ತಿರುಗೇಟು ನೀಡಿದ್ದರು.
ಸಿಂಗು ಗಡಿಯಲ್ಲಿ ರೈತರನ್ನುದ್ದೇಶಿಸಿ ಮಾತನಾಡಿದ ದೋಸಾಂಜ್, ಹೊಸ ಇತಿಹಾಸ ಸೃಷ್ಟಿಸಿರುವ ಎಲ್ಲಾ ರೈತರಿಗೂ ಹ್ಯಾಟ್ಸ್ ಆಫ್, ಈ ಇತಿಹಾಸವನ್ನು ಮುಂದಿನ ಪೀಳಿಗೆಗೆ ವಿವರಿಸಲಾಗುವುದು. ರೈತರ ಸಮಸ್ಯೆಗಳನ್ನು ಯಾರೂ ಕೂಡಾ ಬೇರೆ ಕಡೆಗೆ ತಿರುಗಿಸಬಾರದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


