ವಿವಾದಾತ್ಮಕ ಹೇಳಿಕೆ: ಸೂಪರ್ ಸ್ಟಾರ್ ರಜನಿಕಾಂತ್ ಗೆ ಎರಡನೇ ಬಾರಿಗೆ ಸಮನ್ಸ್!
ಕಳೆದ ಎರಡು ವರ್ಷಗಳ ಹಿಂದೆ ನಡೆದಿದ್ದ ತುತುಕೂಡಿ ಪೊಲೀಸ್ ಫೈರಿಂಗ್ ಘಟನೆ ಬಗ್ಗೆ ವಿಚಾರಣೆ ನಡೆಸುತ್ತಿರುವ ಏಕ ವ್ಯಕ್ತಿ ಆಯೋಗವು, ಬರುವ ಜನವರಿ 19 ರಂದು ವಿಚಾರಣೆಗೆ ಹಾಜರಾಗುವಂತೆ ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಸಮನ್ಸ್ ನೀಡಿದೆ.

ತುತುಕೂಡಿ: ಕಳೆದ ಎರಡು ವರ್ಷಗಳ ಹಿಂದೆ ನಡೆದಿದ್ದ ತುತುಕೂಡಿ ಪೊಲೀಸ್ ಫೈರಿಂಗ್ ಘಟನೆ ಬಗ್ಗೆ ವಿಚಾರಣೆ ನಡೆಸುತ್ತಿರುವ ಏಕ ವ್ಯಕ್ತಿ ಆಯೋಗವು, ಬರುವ ಜನವರಿ 19 ರಂದು ವಿಚಾರಣೆಗೆ ಹಾಜರಾಗುವಂತೆ ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಸಮನ್ಸ್ ನೀಡಿದೆ. ವಿಚಾರಣೆಗಾಗಿ ಎರಡನೇ ಬಾರಿಗೆ ರಜನಿಕಾಂತ್ ಅವರಿಗೆ ಆಯೋಗ ಸಮನ್ಸ್ ನೀಡಿದೆ.
2018 ರ ಮೇ ತಿಂಗಳಲ್ಲಿ ರಜನಿಕಾಂತ್ ಸಂತ್ರಸ್ತರನ್ನು ಭೇಟಿ ಮಾಡಲು ಬಂದಾಗ ಸ್ಟರ್ಲೈಟ್ ವಿರೋಧಿ ಪ್ರತಿಭಟನಾಕಾರರ ಮೇಲೆ ಪೊಲೀಸರು ಗುಂಡು ಹಾರಿಸಿದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಸಮಾಜ ವಿರೋಧಿ ಶಕ್ತಿಗಳು ಪ್ರತಿಭಟನೆಯೊಳಗೆ ಸೇರಿಕೊಂಡಿದ್ದಾರೆ ಎಂದು ಅವರು ಹೇಳಿದ್ದರು.
ಈ ವರ್ಷದ ಫೆಬ್ರವರಿಯಲ್ಲಿ ನಿವೃತ್ತ ನ್ಯಾಯಾಧೀಶ ಅರುಣಾ ಜಗದೀಶನ್ ನೇತೃತ್ವದ ಆಯೋಗ, ರಜನಿಕಾಂತ್ ಗೆ ಸಮನ್ಸ್ ನೀಡಿತ್ತು. ಆದರೆ, ತುತುಕೂಡಿಗೆ ಬಂದರೆ ಕಾನೂನು ಮತ್ತು ಸುವ್ಯವಸ್ಥೆಗೆ ತೊಂದರೆಯಾಗಲಿದೆ ಎಂದು ಹೇಳುವ ಮೂಲಕ ರಜನಿಕಾಂತ್ ವಿನಾಯಿತಿ ಬಯಸಿದ್ದರು. ಆದಾಗ್ಯೂ, ಬರುವ ವರ್ಷದ ಜನವರಿ 19 ರಂದು ವಿಚಾರಣೆಗೆ ಹಾಜರಾಗುವಂತೆ ಆಯೋಗ ಸಮನ್ಸ್ ನೀಡಿದೆ. 24 ನೇ ಹಂತದ ವಿಚಾರಣೆಯನ್ನು 2021 ರ ಜನವರಿ 18 ರಿಂದ 22 ರವರೆಗೆ ನಿಗದಿಪಡಿಸಲಾಗಿದೆ.
ರಿಜಿಸ್ಟರ್ ಪೋಸ್ಟ್ ಮೂಲಕ ಸಮನ್ಸ್ ಕಳುಹಿಸಲಾಗಿದೆ ಎಂದು ಆಯೋಗದ ಮೂಲಗಳು ಖಚಿತಪಡಿಸಿವೆ. ಸಾಕ್ಷ್ಯಧಾರದ ಮೇಲೆ ರಜನಿಕಾಂತ್ ಈ ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳುವ ಸಾಧ್ಯತೆಯಿರುವುದಾಗಿ ಮೂಲಗಳು ಹೇಳಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


