ಜಮ್ಮು-ಕಾಶ್ಮೀರ: ಕುಲ್ಗಾಂನಲ್ಲಿ ಭದ್ರತಾ ಪಡೆಗಳಿಗೆ ಇಬ್ಬರು ಎಲ್‌ಇಟಿ ಉಗ್ರರು ಶರಣು
ದಕ್ಷಿಣ ಕಾಶ್ಮೀರದ ಕುಲ್ಗಾಂ ಜಿಲ್ಲೆಯ ಟೋಂಗ್‌ಡೌನು ಎಂಬಲ್ಲಿ ಭದ್ರತಾ ಪಡೆಗಳೊಂದಿಗೆ ಮುಖಾಮುಖಿಯಾದ ಸಂದರ್ಭದಲ್ಲಿ ಲಷ್ಕರ್-ಎ-ತೋಯ್ಬಾ (ಎಲ್‌ಇಟಿ) ಉಗ್ರ ಸಂಘಟನೆಗೆ ಸೇರಿದ ಇಬ್ಬರು ಭಯೋತ್ಪಾದಕರು, ಶಸ್ತ್ರ ತ್ಯಾಗ ಮಾಡಿ ಶರಣಾಗತರಾಗಿದ್ದಾರೆಂದು ಮಂಗಳವಾರ ತಿಳಿದುಬಂದಿದೆ.

ಕುಲ್ಗಾಮ್: ದಕ್ಷಿಣ ಕಾಶ್ಮೀರದ ಕುಲ್ಗಾಂ ಜಿಲ್ಲೆಯ ಟೋಂಗ್‌ಡೌನು ಎಂಬಲ್ಲಿ ಭದ್ರತಾ ಪಡೆಗಳೊಂದಿಗೆ ಮುಖಾಮುಖಿಯಾದ ಸಂದರ್ಭದಲ್ಲಿ ಲಷ್ಕರ್-ಎ-ತೋಯ್ಬಾ (ಎಲ್‌ಇಟಿ) ಉಗ್ರ ಸಂಘಟನೆಗೆ ಸೇರಿದ ಇಬ್ಬರು ಭಯೋತ್ಪಾದಕರು, ಶಸ್ತ್ರ ತ್ಯಾಗ ಮಾಡಿ ಶರಣಾಗತರಾಗಿದ್ದಾರೆಂದು ಮಂಗಳವಾರ ತಿಳಿದುಬಂದಿದೆ.
ಎನ್ಕೌಂಟರ್ ನಡೆಯುತ್ತಿದ್ದ ಸ್ಥಳಕ್ಕೆ ಉಗ್ರರ ಕುಟುಂಬಸ್ಥರನ್ನು ಸೇನಾಪಡೆ ಕರೆತಂದಿದ್ದು, ಈ ವೇಳೆ ಅವರ ಮನವಿಯನ್ನು ಕೇಳಿದ ಉಗ್ರರು ಶರಣಾಗಲು ಒಪ್ಪಿಗೆ ನೀಡಿದ್ದಾರೆಂದು ವರದಿಗಳು ತಿಳಿಸಿವೆ.
ಕುಲ್ಗಾಂನಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಆಧಾರದ ಮೇಲೆ ಭದ್ರತಾಪಡೆಗಳು ಟೋಂಗ್‌ಡೌನುನಲ್ಲಿ ಎನ್‌ಕೌಂಟರ್ ನಡೆಸಲು ಆರಂಭಿಸಿದ್ದರು.ಪ್ರದೇಶವನ್ನು ಸುತ್ತುವರಿದು ಕಾರ್ಯಾಚರಣೆಯನ್ನು ಆರಂಭಿಸಿದ್ದರು.
ಕಾರ್ಯಾಚರಣೆ ನಡೆಯುತ್ತಿರುವಾಗ, ಭಯೋತ್ಪಾದಕರ ಕುಟುಂಬಗಳು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಶರಣಾಗುವಂತೆ ಉಗ್ರರಿಗೆ ಮನವಿ ಮಾಡಿದರು.
ಈ ವೇಳೆ ಲಷ್ಕರ್-ಎ-ತೋಯ್ಬಾಕ್ಕೆ ಸೇರಿದ ಇಬ್ಬರು ಸ್ಥಳೀಯ ಭಯೋತ್ಪಾದಕರು ಪೊಲೀಸ್ ಮತ್ತು ಭದ್ರತಾ ಪಡೆಗಳ ಮುಂದೆ ಶರಣಾದರು. ಶರಣಾಗತಿಯಾದ ಉಗ್ರರಿಂದ ಭದ್ರತಾಪಡೆಗಳು ಎರಡು ಪಿಸ್ತೂಲ್ ಸೇರಿದಂತೆ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳು ಮತ್ತು ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.
“ಕುಲ್ಗಾಮ್ ಟೋಂಗ್‌ಡೌನುನಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವಿನ ಮುಖಾಮುಖಿಯ ಸಂದರ್ಭ, ಎಲ್ಇಟಿಯ ಉಗ್ರ ಸಂಘಟನೆಯ ಇಬ್ಬರು ಸ್ಥಳೀಯ ಭಯೋತ್ಪಾದಕರು ಕುಟುಂಬಗಳ ಮನವಿಯ ಮೇರೆಗೆ ಶರಣಾದರು. ಎರಡು ಪಿಸ್ತೂಲ್ ಮತ್ತು ಮದ್ದುಗುಂಡುಗಳು ಸೇರಿದಂತೆ ಅಪರಾಧದ ವಸ್ತುಗಳನ್ನು ಅವರಿಂದ ವಶಪಡಿಸಿಕೊಳ್ಳಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


