ದೇಶ

ಬ್ರಿಟನ್‌ನಲ್ಲಿ ಪತ್ತೆಯಾಗಿರುವ ಹೊಸ ಸ್ವರೂಪದ ಕೊರೋನಾ ವೈರಸ್ ಭಾರತದಲ್ಲಿ ಪತ್ತೆಯಾಗಿಲ್ಲ: ಕೇಂದ್ರ ಸರ್ಕಾರ

ಬ್ರಿಟನ್ ನಲ್ಲಿ ಪತ್ತೆಯಾದ ಎಸ್‌ಎಆರ್ಎಸ್-ಕೋವಿ -2 ರೂಪಾಂತರಿತ ಕೊರೋನಾ ವೈರಸ್ ಬಗ್ಗೆ ಯಾವುದೇ ಆತಂಕ ಅಥವಾ ಭೀತಿ ಬೇಡಿ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಬ್ರಿಟನ್‌ನಲ್ಲಿ ಪತ್ತೆಯಾಗಿರುವ ಹೊಸ ಸ್ವರೂಪದ ಕೊರೋನಾ ವೈರಸ್ ಭಾರತದಲ್ಲಿ ಪತ್ತೆಯಾಗಿಲ್ಲ: ಕೇಂದ್ರ ಸರ್ಕಾರ
ಸಂಗ್ರಹ ಚಿತ್ರ
Published On :

ನವದೆಹಲಿ: ಬ್ರಿಟನ್ ನಲ್ಲಿ ಪತ್ತೆಯಾದ ಎಸ್‌ಎಆರ್ಎಸ್-ಕೋವಿ -2 ರೂಪಾಂತರಿತ ಕೊರೋನಾ ವೈರಸ್ ಬಗ್ಗೆ ಯಾವುದೇ ಆತಂಕ ಅಥವಾ ಭೀತಿ ಬೇಡಿ ಎಂದು ಕೇಂದ್ರ ಸರ್ಕಾರ ತಿಳಿಸಿದೆ. 

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಎನ್‌ಐಟಿಐ ಆಯೋಗದ ಸದಸ್ಯ(ಆರೋಗ್ಯ) ಡಾ. ವಿ ಕೆ ಪಾಲ್, ಭಾರತದಲ್ಲಿ ರೂಪಾಂತರಿತ ಕೊರೋನಾವೈರಸ್ ಪತ್ತೆಯಾಗಿಲ್ಲ ಎಂದು ಹೇಳಿದ್ದಾರೆ. ಬ್ರಿಟನ್ ನಲ್ಲಿ ಪತ್ತೆಯಾದ ರೂಪಾಂತರಿತ ಎಸ್‌ಎಆರ್ಎಸ್-ಕೋವಿ -2 ಅಭಿವೃದ್ಧಿ ಪಡಿಸಿರುವ ಲಸಿಕೆಗಳ ಸಾಮರ್ಥ್ಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೇಳಿದರು.

ಲಭ್ಯವಿರುವ ದತ್ತಾಂಶ, ಆಳವಾದ ತಿಳುವಳಿಕೆ ಮತ್ತು ನಮ್ಮ ಆಳವಾದ ಮೌಲ್ಯಮಾಪನದ ಆಧಾರದ ಮೇಲೆ, ರೂಪಾಂತರಿತ ವೈರಸ್ ಬಗ್ಗೆ ಭಯಪಡುವ ಅಗತ್ಯವಿಲ್ಲ. ಆದರೆ ಇದು ಹೆಚ್ಚು ಜಾಗರೂಕರಾಗಿರಲು ಒಂದು ಕಾರಣವಾಗಿದೆ. ಈ ಹೊಸ ಸವಾಲನ್ನು ನಾವು ನಮ್ಮ ಸಮಗ್ರ ಪ್ರಯತ್ನಗಳ ಮೂಲಕ ಎದುರಿಸಬೇಕಾಗಿದೆ. ಕೊವೀಡ್ ಮಾರ್ಗಸೂಚಿಗಳನ್ನು ಸರಿಯಾಗಿ ಅನುಸರಿಸಿ ಎಂದು ಪಾಲ್ ಹೇಳಿದರು.

ಈ ರೂಪಾಂತರಿತ ವೈರಸ್ ಗೆ ಚಿಕಿತ್ಸೆಯ ಮಾರ್ಗಸೂಚಿಗಳಲ್ಲಿ ಯಾವುದೇ ಬದಲಾವಣೆಗಳಿಲ್ಲ. ಇನ್ನು ಮುಖ್ಯವಾಗಿ ದೇಶದಲ್ಲಿ ಅಭಿವೃದ್ಧಿ ಪಡಿಸುತ್ತಿರುವ ಲಸಿಕೆಗಳ ಮೇಲೆ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ ಎಂದು ಅವರು ಹೇಳಿದರು.

ರೂಪಾಂತರಿತ ವೈರಸ್ ಹೆಚ್ಚು ಸಾಂಕ್ರಾಮಿಕವಾಗಬಹುದು. ಇನ್ನು ಇದು ಜನರಲ್ಲಿ ಸುಲಭವಾಗಿ ಹರಡಬಹುದು ಎಂದು ಪಾಲ್ ಹೇಳಿದರು.

ಈ ವೈರಸ್‌ಗಳಲ್ಲಿ ಹರಡುವಿಕೆಯು ಶೇಕಡಾ 70ರಷ್ಟು ಹೆಚ್ಚಾಗಿದೆ. ನೀವು ಸೋಂಕಿತರನ್ನು ಒಂದು ರೀತಿಯಲ್ಲಿ ಸೂಪರ್ ಸ್ಪ್ರೆಡರ್ ಎಂದೂ ಕರೆಯಬಹುದು. ಆದರೆ ಇದು ಸಾವಿನ ಪ್ರಮಾಣ, ಆಸ್ಪತ್ರೆಗೆ ದಾಖಲು ಮತ್ತು ರೋಗದ ತೀವ್ರತೆಯನ್ನು ಹೆಚ್ಚಿಸುವುದಿಲ್ಲ ಎಂದು ಹೇಳಲಾಗುತ್ತಿದೆ. ಹೆಚ್ಚು ಜನರ ಮೇಲೆ ಪರಿಣಾಮ ಬೀರುವ ಪ್ರವೃತ್ತಿಯು ಕೊಂಚ ಕಳವಳಕ್ಕೆ ಕಾರಣವಾಗಿದೆ. ಇದು ವ್ಯತಿರಿಕ್ತ ಬೆಳವಣಿಗೆಯಾಗಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.