2021ರ ಫೆಬ್ರವರಿವರೆಗೂ ಸಿಬಿಎಸ್ಇ ಬೋರ್ಡ್ ಪರೀಕ್ಷೆ ಇಲ್ಲ: ಕೇಂದ್ರ ಸಚಿವ ರಮೇಶ್ ಪೋಕ್ರಿಯಾಲ್ ನಿಶಾಂಕ್
ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕ ಹಿನ್ನಲೆಯಲ್ಲಿ 2021ರ ಫೆಬ್ರವರಿ ವರೆಗೂ ಸಿಬಿಎಸ್ಇ ಬೋರ್ಡ್ ಪರೀಕ್ಷೆಗಳನ್ನು ನಡೆಸಲಾಗುವುದಿಲ್ಲ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಕ್ರಿಯಾಲ್ ನಿಶಾಂಕ್ ಹೇಳಿದ್ದಾರೆ.

ನವದೆಹಲಿ: ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕ ಹಿನ್ನಲೆಯಲ್ಲಿ 2021ರ ಫೆಬ್ರವರಿ ವರೆಗೂ ಸಿಬಿಎಸ್ಇ ಬೋರ್ಡ್ ಪರೀಕ್ಷೆಗಳನ್ನು ನಡೆಸಲಾಗುವುದಿಲ್ಲ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಕ್ರಿಯಾಲ್ ನಿಶಾಂಕ್ ಹೇಳಿದ್ದಾರೆ.
ರಮೇಶ್ ಪೋಕ್ರಿಯಾಲ್ ನಿಶಾಂಕ್ ಅವರು ಇಂದು ದೇಶಾದ್ಯಂತ ಶಿಕ್ಷಕರೊಂದಿಗೆ ಸಂವಾದ ವೆಬಿನಾರ್ ಸಂವಾದ ನಡೆಸಿದರು. ಸಂವಾದದ ಸಂದರ್ಭದಲ್ಲಿ, ಶಿಕ್ಷಣ ಸಚಿವರು ಜನವರಿ ಮತ್ತು ಫೆಬ್ರವರಿಯಲ್ಲಿ ಯಾವುದೇ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಲಾಗುವುದಿಲ್ಲ ಎಂದು ಹೇಳಿದರು.
'ಮುಂದಿನ ವರ್ಷ ಅಂದರೆ 2021ರ ಫೆಬ್ರವರಿ ತನಕ ಬೋರ್ಡ್ ಪರೀಕ್ಷೆಗಳನ್ನು ನಡೆಸಲಾಗುವುದಿಲ್ಲ ಮತ್ತು ಪರೀಕ್ಷೆಯ ವೇಳಾಪಟ್ಟಿಯ ಬಗ್ಗೆ ಆ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು. ಜನವರಿಯಿಂದ ಶಾಲಾ-ಕಾಲೇಜುಗಳ ಪುನಾರಂಭ ಮಾಡಲು ಶಿಕ್ಷಣ ಸಂಸ್ಥೆಗಳು ಸಿದ್ಧತೆ ನಡೆಸುತ್ತಿವೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


