ಅಫ್ಘಾನಿಸ್ತಾನ-ಫಿಲಿಪೈನ್ಸ್ ಜೊತೆ ಪರಿಷ್ಕೃತ ವಿಮಾನ ಸೇವಾ ಒಪ್ಪಂದಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ
ಅಫ್ಘಾನಿಸ್ತಾನ-ಫಿಲಿಪೈನ್ಸ್ ನಡುವಿನ ಪರಿಷ್ಕೃತ ವಿಮಾನ ಸೇವೆಗಳ ಒಪ್ಪಂದಕ್ಕೆ ಸಹಿ ಹಾಕಲು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಅನುಮೋದನೆ ನೀಡಿದೆ.

ನವದೆಹಲಿ: ಅಫ್ಘಾನಿಸ್ತಾನ-ಫಿಲಿಪೈನ್ಸ್ ನಡುವಿನ ಪರಿಷ್ಕೃತ ವಿಮಾನ ಸೇವೆಗಳ ಒಪ್ಪಂದಕ್ಕೆ ಸಹಿ ಹಾಕಲು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಅನುಮೋದನೆ ನೀಡಿದೆ.
ಪರಿಷ್ಕೃತ ವಾಯು ಸೇವೆಗಳ ಒಪ್ಪಂದವು ಉಭಯ ದೇಶಗಳ ನಡುವಿನ ನಾಗರಿಕ ವಿಮಾನ ಯಾನ ಸಂಬಂಧಗಳಲ್ಲಿ ಪ್ರಮುಖ ಮೈಲಿಗಲ್ಲಾಗಿದೆ ಮತ್ತು ಉಭಯ ದೇಶಗಳ ನಡುವೆ ಹೆಚ್ಚಿನ ವ್ಯಾಪಾರ, ಹೂಡಿಕೆ, ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ವಿನಿಮಯವನ್ನು ಉತ್ತೇಜಿಸುವ ಸಾಮರ್ಥ್ಯವನ್ನು ಹೊಂದಿದ್ದು, ನಾಗರಿಕ ವಿಮಾನಯಾನ ಕ್ಷೇತ್ರದ ಬೆಳವಣಿಗೆಗಳಿಗೆ ಅನುಗುಣವಾಗಿದೆ. ಇದು ಹೆಚ್ಚಿನ ಭದ್ರತೆ ಮತ್ತು ಸುರಕ್ಷತೆಯ ಖಾತ್ರಿಯೊಂದಿಗೆ ಎರಡೂ ಕಡೆಯ ವಾಹಕಗಳಿಗೆ ವಾಣಿಜ್ಯ ಅವಕಾಶಗಳನ್ನು ನೀಡಲು ವರ್ಧಿತ ಮತ್ತು ತಡೆರಹಿತ ಸಂಪರ್ಕಕ ವ್ಯವಸ್ಥೆಯನ್ನು ಒದಗಿಸುತ್ತದೆ.
ಫಿಲಿಪೈನ್ಸ್ ಜೊತೆ ಪರಿಷ್ಕೃತ ವೈಮಾನಿಕ ಸೇವೆಗಳ ಒಪ್ಪಂದಕ್ಕೆ ಸಹಿ ಹಾಕಲು ಸಚಿವ ಸಂಪುಟ ಒಪ್ಪಿಗೆ
ಭಾರತ ಮತ್ತು ಫಿಲಿಪೈನ್ಸ್ ನಡುವಿನ ಪರಿಷ್ಕೃತ ವೈಮಾನಿಕ ಸೇವೆಗಳ ಒಪ್ಪಂದಕ್ಕೆ ಸಹಿ ಹಾಕಲು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.
ಸಭೆಯ ನಂತರ ಸುದ್ದಿಗಾರರಿಗೆ ಮಾಹಿತಿ ನೀಡಿದ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್, ಪರಿಷ್ಕೃತ ವೈಮಾನಿಕ ಸೇವೆಗಳ ಒಪ್ಪಂದವು ಉಭಯ ದೇಶಗಳ ನಡುವಿನ ನಾಗರಿಕ ವಿಮಾನಯಾನ ಸಂಬಂಧಗಳಲ್ಲಿ ಪ್ರಮುಖ ಹೆಗ್ಗುರುತೊಂದನ್ನು ಸೂಚಿಸುತ್ತದೆ. ಒಪ್ಪಂದವು ಹೆಚ್ಚಿನ ಸೇವೆಗಳು ಮತ್ತು ಸುಗಮ ಸಂಪರ್ಕಕ್ಕೆ ಸಹಕಾರಿಯಾಗಲಿದೆ. ಅಲ್ಲದೆ, ಸುರಕ್ಷತೆ ಮತ್ತು ಭದ್ರತೆಯೊಂದಿಗೆ ಎರಡೂ ದೇಶಗಳ ನಡುವಿನ ವಿಮಾನಯಾನ ಸಂಸ್ಥೆಗಳಿಗೆ ವಾಣಿಜ್ಯ ಅವಕಾಶಗಳನ್ನು ಒದಗಿಸುತ್ತದೆ ಎಂದು ಹೇಳಿದ್ದಾರೆ.
ಉಭಯ ದೇಶಗಳ ನಡುವೆ ವ್ಯಾಪಾರ, ಹೂಡಿಕೆ, ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ವಿನಿಮಯವನ್ನು ವೃದ್ಧಿಸುವ ಸಾಮರ್ಥ್ಯವನ್ನು ಒಪ್ಪಂದ ಹೊಂದಿದೆ ಎಂದು ಸಚಿವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


