ಕೊರೋನಾ ಬಿಕ್ಕಟ್ಟಿನಿಂದಾಗಿ ಭಾರತ-ರಷ್ಯಾ ಶೃಂಗಸಭೆ ರದ್ದು, ಸುಳ್ಳಿನ ಮೂಲಕ ದಿಕ್ಕು ತಪ್ಪಿಸಬೇಡಿ: ಅನುರಾಗ್ ಶ್ರೀವಾಸ್ತವ
ಕೋವಿಡ್ -19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಭಾರತ-ರಷ್ಯಾ ನಡುವಿನ ವಾರ್ಷಿಕ ಶೃಂಗಸಭೆ ನಡೆಯುವುದಿಲ್ಲ ಎಂದು ವಿದೇಶಾಂಗ ಸಚಿವಾಲಯ ಬುಧವಾರ ತಿಳಿಸಿದೆ.

ನವದೆಹಲಿ: ಕೋವಿಡ್ -19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಭಾರತ-ರಷ್ಯಾ ನಡುವಿನ ವಾರ್ಷಿಕ ಶೃಂಗಸಭೆ ನಡೆಯುವುದಿಲ್ಲ ಎಂದು ವಿದೇಶಾಂಗ ಸಚಿವಾಲಯ ಬುಧವಾರ ತಿಳಿಸಿದೆ.
ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಗೆ ಸಂಬಂಧಿಸಿದ ಮಾಧ್ಯಮ ವರದಿಗೆ ಪ್ರತಿಕ್ರಿಸಿರುವ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ, ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ಈ ವರ್ಷ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆ ನಡೆಯುವುದಿಲ್ಲ ಎಂದರು.
ಇದು ಎರಡೂ ದೇಶಗಳ ಸರ್ಕಾರಗಳ ನಡುವೆ ಪರಸ್ಪರ ಒಪ್ಪಿಗೆಯ ನಿರ್ಧಾರವಾಗಿದೆ. ಈ ಕುರಿತ ತಪ್ಪುಗ್ರಹಿಕೆಯ ಯಾವುದೇ ವರದಿ ಸುಳ್ಳು ಮತ್ತು ದಿಕ್ಕು ತಪ್ಪಿಸುವುದಾಗಿದೆ. ಪ್ರಮುಖ ಸಂಬಂಧಗಳಲ್ಲಿ ಸುಳ್ಳು ಕಥೆಗಳನ್ನು ಹರಡುವುದು ತುಂಬಾ ಬೇಜವಾಬ್ದಾರಿತನದ್ದಾಗಿದೆ ಎಂದು ಅವರು ಹೇಳಿದ್ದಾರೆ.
ಕೊರೋನಾ ಬಿಕ್ಕಟ್ಟಿನಿಂದಾಗಿ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯನ್ನು ರದ್ದುಪಡಿಸಲಾಗಿದೆ ಎಂದು ಸರ್ಕಾರ ಹೇಳಿತ್ತು. ಈ ಬಗ್ಗೆ ಟ್ವೀಟ್ ಮಾಡಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, 'ಸಾಂಪ್ರದಾಯಿಕ ಸಂಬಂಧಗಳಿಗೆ ಹಾನಿ' ಇದು ಭಾರತದ ಭವಿಷ್ಯಕ್ಕೆ ಅಪಾಯಕಾರಿ ಎಂದು ಟ್ವೀಟಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


