ಕಾಂಗ್ರೆಸ್ ಗೆ ಮತ್ತೊಂದು ಆಘಾತ: ಮಹಾರಾಷ್ಟ್ರದಲ್ಲಿ 18 ಮಂದಿ ಕಾರ್ಪೊರೇಟರ್ ಗಳು 'ಕೈ' ಬಿಟ್ಟು ಎನ್ ಸಿಪಿ ಸೇರ್ಪಡೆ!
ಸತತ ಸೋಲು ಕಾಣುತ್ತಿರುವ ಕಾಂಗ್ರೆಸ್ ಗೆ ಮತ್ತಷ್ಟು ಆಘಾತವನ್ನುಂಟುಮಾಡಿದೆ. ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡ್ ನಡಿ ಮೈತ್ರಿ ಮಾಡಿಕೊಂಡು ಶಿವಸೇನೆ, ಎನ್ ಸಿಪಿಗೆ ಬೆಂಬಲ ಸೂಚಿಸಿರುವ ಕಾಂಗ್ರೆಸ್ ನಿಂದಲೇ ಇದೀಗ ನಾಯಕರು ಎನ್ ಸಿಪಿಗೆ ವಲಸೆ ಹೋಗಿದ್ದಾರೆ.

ಮುಂಬೈ: ಸತತ ಸೋಲು ಕಾಣುತ್ತಿರುವ ಕಾಂಗ್ರೆಸ್ ಗೆ ಮತ್ತಷ್ಟು ಆಘಾತವನ್ನುಂಟುಮಾಡಿದೆ. ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡ್ ನಡಿ ಮೈತ್ರಿ ಮಾಡಿಕೊಂಡು ಶಿವಸೇನೆ, ಎನ್ ಸಿಪಿಗೆ ಬೆಂಬಲ ಸೂಚಿಸಿರುವ ಕಾಂಗ್ರೆಸ್ ನಿಂದಲೇ ಇದೀಗ ನಾಯಕರು ಎನ್ ಸಿಪಿಗೆ ವಲಸೆ ಹೋಗಿದ್ದಾರೆ.
ಮಹಾರಾಷ್ಟ್ರದ ಬಿವಂಡಿ ನಿಝಂಪುರ್ ಮುನ್ಸಿಪಲ್ ಕಾರ್ಪೊರೇಶನ್ ನ 18 ಕಾಂಗ್ರೆಸ್ ಕಾರ್ಪೊರೇಟರ್ ಗಳು ನಿನ್ನೆ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ(ಎನ್ ಸಿಪಿ) ಸೇರಿದ್ದಾರೆ. ಅವರಲ್ಲಿ ಉಪ ಮೇಯರ್ ಇಮ್ರಾನ್ ಆಲಿ ಮೊಹಮ್ಮದ್ ಖಾನ್ ಕೂಡ ಸೇರಿದ್ದಾರೆ.
ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಎನ್ ಸಿಪಿ ನಾಯಕ ಅಜಿತ್ ಪವಾರ್ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಜಯಂತ್ ಪಾಟೀಲ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಎನ್ ಸಿಪಿಗೆ ಸೇರ್ಪಡೆಗೊಂಡರು.
ಮಹಾರಾಷ್ಟ್ರ ಸರ್ಕಾರದಲ್ಲಿ ಮೈತ್ರಿಪಕ್ಷಗಳಾಗಿರುವ ಕಾಂಗ್ರೆಸ್ ಮತ್ತು ಎನ್ ಸಿಪಿ ಮಧ್ಯೆ ನಿನ್ನೆ ಕಾಂಗ್ರೆಸ್ ನಾಯಕರು ಎನ್ ಸಿಪಿಗೆ ಸೇರ್ಪಡೆಗೊಂಡಿದ್ದು ರಾಜಕೀಯವಾಗಿ ಕಾಂಗ್ರೆಸ್ ಗೆ ಭಾರೀ ಮುಖಭಂಗ ಎನ್ನಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


