ಮಾಸ್ಕ್ ಉತ್ಪಾದನಾ ಘಟಕದಲ್ಲಿ ಬೆಂಕಿ ಅವಘಡ; ಓರ್ವ ಸಾವು, ಮೂವರ ರಕ್ಷಣೆ
ಮಾಸ್ಕ್ ಉತ್ಪಾದನಾ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಓರ್ವ ಸಾವನ್ನಪ್ಪಿ, ಇತರ ಮೂವರನ್ನು ರಕ್ಷಿಸಿರುವ ಘಟನೆ ಇಂದು ಬೆಳಗ್ಗೆ ರಾಷ್ಟ್ರರಾಜಧಾನಿ ನವದೆಹಲಿಯ ಮಾಯಾಪುರಿ ಪ್ರದೇಶದಲ್ಲಿ ನಡೆದಿದೆ.

ನವದೆಹಲಿ: ಮಾಸ್ಕ್ ಉತ್ಪಾದನಾ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಓರ್ವ ಸಾವನ್ನಪ್ಪಿ, ಇತರ ಮೂವರನ್ನು ರಕ್ಷಿಸಿರುವ ಘಟನೆ ಇಂದು ಬೆಳಗ್ಗೆ ರಾಷ್ಟ್ರರಾಜಧಾನಿ ನವದೆಹಲಿಯ ಮಾಯಾಪುರಿ ಪ್ರದೇಶದಲ್ಲಿ ನಡೆದಿದೆ.
ಬೆಳಗ್ಗಿನ ಜಾವ 3.54ರ ವೇಳೆಗೆ ಬೆಂಕಿ ಅವಘಡದ ವಿಷಯ ಮಾಹಿತಿ ಲಭಿಸಿತು. ವಿಷಯ ತಿಳಿದ ತಕ್ಷಣ ದೆಹಲಿ ಅಗ್ನಿಶಾಮಕ ದಳದ 6 ವಾಹನ ತೆರಳಿ ಕಾರ್ಯಾಚರಣೆ ನಡೆಸಿದೆ. ಮೃತರನ್ನು ಜುಗಲ್ ಕಿಶೋರ್ ಎಂದು ಗುರುತಿಸಲಾಗಿದೆ ಎಂದು ದೆಹಲಿ ಅಗ್ನಿಶಾಮಕ ದಳದ ಮುಖ್ಯಸ್ಥ ಅತುಲ್ ಗರ್ಗ್ ತಿಳಿಸಿದ್ದಾರೆ.
ಉತ್ಪಾದನಾ ಘಟಕದ ಮೂರನೇ ಮಹಡಿಯಲ್ಲಿರುವ ಯಂತ್ರಗಳು ಮತ್ತು ಕಚ್ಚಾ ವಸ್ತುಗಳು ಬೆಂಕಿಗೆ ಆಹುತಿಯಾದ ನಂತರ ಈ ಅಪಘಾತ ಸಂಭವಿಸಿದೆ ಎಂದು ಡಿಎಫ್‌ಎಸ್ ಮುಖ್ಯಸ್ಥರು ತಿಳಿಸಿದ್ದಾರೆ. ಡಿಎಫ್ ಎಸ್ ತಂಡವು ಘಟಕದ ಬಾಗಿಲು ಮತ್ತು ಗೋಡೆಗಳನ್ನು ಒಡೆದ ನಂತರ ಮೂವರನ್ನು ರಕ್ಷಿಸಲಾಗಿದೆ ಎಂದು ಅವರು ಹೇಳಿದರು. ರಕ್ಷಿಸಿದವರನ್ನು ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


