ಅಟಲ್ ಸುರಂಗದಲ್ಲಿ ಸಂಚಾರಕ್ಕೆ ಅಡ್ಡಿಪಡಿಸಿ ನೃತ್ಯ: 10 ಪ್ರವಾಸಿಗರ ಬಂಧನ
ಇತ್ತೀಚೆಗಷ್ಟೇ ಉದ್ಘಾಟನೆಯಾಗಿದ್ದ ವಿಶ್ವದ ಅತಿ ಉದ್ದದ ಹೆದ್ದಾರಿ ಸುರಂಗ ಮಾರ್ಗ ಅಟಲ್ ಟನಲ್ ನೊಳಗೆ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದ್ದ ಕಾರಣಕ್ಕಾಗಿ, ಹಿಮಾಚಲ ಪ್ರದೇಶ ಪೊಲೀಸರು 10 ಪ್ರವಾಸಿಗರನ್ನು ಬಂಧಿಸಿ, ಮೂರು ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

ಶಿಮ್ಲಾ: ಇತ್ತೀಚೆಗಷ್ಟೇ ಉದ್ಘಾಟನೆಯಾಗಿದ್ದ ವಿಶ್ವದ ಅತಿ ಉದ್ದದ ಹೆದ್ದಾರಿ ಸುರಂಗ ಮಾರ್ಗ ಅಟಲ್ ಟನಲ್ ನೊಳಗೆ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದ್ದ ಕಾರಣಕ್ಕಾಗಿ, ಹಿಮಾಚಲ ಪ್ರದೇಶ ಪೊಲೀಸರು 10 ಪ್ರವಾಸಿಗರನ್ನು ಬಂಧಿಸಿ, ಮೂರು ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.
ಗುರುವಾರ ಸುರಂಗದೊಳಗೆ ವಾಹನ ನಿಲ್ಲಿಸಿ, ಹಾಡು ಹಾಕಿ ನೃತ್ಯ ಮಾಡಿದ್ದರು. ಇದರಿಂದಾಗಿ ಟ್ರಾಫಿಕ್ ಸಮಸ್ಯೆ ಉಂಟಾಗಿತ್ತು. ಪ್ರವಾಸಿಗರೆಲ್ಲರೂ ದೆಹಲಿಯವರಾಗಿದ್ದು, 20–30 ವಯಸ್ಸಿನವರಾಗಿದ್ದಾರೆ. ಕೊರೋನವೈರಸ್ ಸಾಂಕ್ರಾಮಿಕದ ದೃಷ್ಟಿಯಿಂದ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 188 ಮತ್ತು 270ರಡಿಯಲ್ಲಿ ಬಂಧಿತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಎಂದು ಕುಲು ಎಸ್.ಪಿ ಗೌರವ್ ಸಿಂಗ್ ಹೇಳಿದರು.
ಉದ್ಘಾಟನೆಗೊಂಡ ಬಳಿಕ, ಪ್ರವಾಸಿ ತಾಣವಾಗಿರುವ ಈ ಸುರಂಗ ಮಾರ್ಗವು ನಿತ್ಯ ಸಾವಿರಾರು ಪ್ರವಾಸಿಗರನ್ನು ಸೆಳೆಯುತ್ತಿದೆ. ವಿಶ್ವದ ಅತಿ ಉದ್ದದ ಸುರಂಗ ಮಾರ್ಗ ಎಂಬ ಕೀರ್ತಿಗೆ ಪಾತ್ರವಾಗಿರುವ ಅಟಲ್ ಟನಲ್ 10,040 ಅಡಿ ಉದ್ಧವಿದೆ. ಈ ಅಟಲ್ ಟನಲ್ 13,058 ಅಡಿ ಎತ್ತರದ ರೋಹ್ಟಾಂಗ್ ಪಾಸ್‌ನ ಕೆಳಗಿರುವ 9.02 ಕಿ.ಮೀ ಅಂಡರ್‌ಪಾಸ್ ಲಾಹೌಲ್-ಸ್ಪಿಟಿ ಜಿಲ್ಲೆಯ ಲಾಹೌಲ್ ಮತ್ತು ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯ ಮನಾಲಿಯನ್ನು ಸಂಪರ್ಕಿಸುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


