ಶೋಪಿಯಾನ್ ಎನ್ಕೌಂಟರ್: ಇಬ್ಬರು ಉಗ್ರರನ್ನು ಸದೆಬಡಿದ ಸೇನಾಪಡೆ
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಭಾರೀ ಗುಂಡಿನ ಕಾಳಗ ನಡೆಯುತ್ತಿದ್ದು, ಮುಖಾಮುಖಿ ಗುಂಡಿನ ದಾಳಿಯಲ್ಲಿ ಭಾರತೀಯ ಸೇನಾಪಡೆ ಶನಿವಾರ ಮತ್ತೋರ್ವ ಉಗ್ರರನ್ನು ಹತ್ಯೆ ಮಾಡಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಭಾರೀ ಗುಂಡಿನ ಕಾಳಗ ನಡೆಯುತ್ತಿದ್ದು, ಮುಖಾಮುಖಿ ಗುಂಡಿನ ದಾಳಿಯಲ್ಲಿ ಭಾರತೀಯ ಸೇನಾಪಡೆ ಶನಿವಾರ ಮತ್ತೋರ್ವ ಉಗ್ರರನ್ನು ಹತ್ಯೆ ಮಾಡಿದೆ ಎಂದು ವರದಿಗಳಿಂದ ತಿಳಿದುಬಂದಿದೆ.
ದಕ್ಷಿಣ ಕಾಶ್ಮೀರದ ಶೋಪಿಯಾನ್‌ನ ಕನಿಗಮ್ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಆಧಾರದ ಮೇಲೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಪ್ರಾರಂಭಿಸಿದ್ದವು.
ಕಾರ್ಯಾಚರಣೆ ಆರಂಭವಾಗುತ್ತಿದ್ದಂತೆಯೇ ಅಡಗಿ ಕುಳಿತಿದ್ದ ಉಗ್ರರು ಭದ್ರತಾಪಡೆಗಳ ಮೇಲೆ ಏಕಾಏಕಿ ದಾಳಿ ನಡೆಸಿದ್ದಾರೆ. ಕೂಡಲೇ ಭದ್ರತಾಪಡೆಗಳು ಕಾರ್ಯಾಚರಣೆಯನ್ನು ಚುರುಕುಗೊಳಿಸಿ ಈ ಹಿಂದೆ ಓರ್ವ ಉಗ್ರನನ್ನು ಹತ್ಯೆ ಮಾಡಿತ್ತು. ಇದೀಗ ಮತ್ತೋರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದ್ದು, ಉಗ್ರರ ದಾಳಿಗೆ ಭದ್ರತಾಪಡೆಗಳು ದಿಟ್ಟ ಉತ್ತರವನ್ನು ನೀಡುತ್ತಿವೆ.
ಈ ನಡುವೆ ಜಮ್ಮು ಮತ್ತು ಕಾಶ್ಮೀರದ ಇದ್ರೇಶ್ವರ್ ನಗರ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನಾಪಡೆ ಕದನ ವಿರಾಮ ಉಲ್ಲಂಘಿಸಿದ್ದು, ಭಾರತೀಯ ಸೇನಾಪಡೆಯ ಯೋಧರನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದೆ ಎಂದು ವರದಿಗಳು ತಿಳಿಸಿವೆ.
ಪಾಕಿಸ್ತಾನದ ದಾಳಿಗೆ ಭಾರತೀಯ ಸೇನಾಪಡೆ ಕೂಡ ದಿಟ್ಟ ಉತ್ತರವನ್ನು ನೀಡುತ್ತಿದೆ ಎಂದು ಬಿಎಸ್ಎಫ್ ಮಾಹಿತಿ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


