ದೇಶ

ವಿವಾಹವಾಗಲು ವ್ಯಕ್ತಿ ನಿರಾಕರಣೆ: ಮನನೊಂದ ಯುವತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣು

ತಾನು ಪ್ರೀತಿಸಿದ ವ್ಯಕ್ತಿ ವಿವಾಹವಾಗಲು ನಿರಾಕರಿಸಿದ ಹಿನ್ನೆಲೆಯಲ್ಲಿ 22 ವರ್ಷದ ಯುವತಿ ಸೀಮೆ ಎಣ್ಣೆ ಸುರಿದು ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ವಿವಾಹವಾಗಲು ವ್ಯಕ್ತಿ ನಿರಾಕರಣೆ: ಮನನೊಂದ ಯುವತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣು
ಸಾಂದರ್ಭಿಕ ಚಿತ್ರ
Published On :

ಕೌಶುಂಭಿ: ತಾನು ಪ್ರೀತಿಸಿದ ವ್ಯಕ್ತಿ ವಿವಾಹವಾಗಲು ನಿರಾಕರಿಸಿದ ಹಿನ್ನೆಲೆಯಲ್ಲಿ 22 ವರ್ಷದ ಯುವತಿ ಸೀಮೆ ಎಣ್ಣೆ ಸುರಿದು ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಉತ್ತರ ಪ್ರದೇಶದ ಕೌಶುಂಭಿಯ ಸಿರಾತುವಿನಲ್ಲಿ ಈ ಘಟನೆ ನಡೆದಿದೆ, ಮೃತ ಯುವತಿ ಮತ್ತು ವ್ಯಕ್ತಿ ಬೇರೆ ಬೇರೆ ಜಾತಿಯವರಾಗಿದ್ದರು, ಹೀಗಾಗಿ ಆತ ವಿವಾಹವಾಗಲು ನಿರಾಕರಿಸಿದ್ದ, ಇದರಿಂದ ಮನನೊಂದ ಆಕೆ ಮಂಗಳವಾರ ಬೆಂಕಿ ಹಚ್ಚಿಕೊಂಡಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು, ಶುಕ್ರವಾರ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಆಚಾರಿ ಸೋಂಕರ್ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿರುವ ಪೊಲೀಸರು ಆತನಿಗಾಗಿ ಹುಡುಕಾಟ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.