ಕೊರೋನಾ ಸೋಂಕಿಗೆ ತುತ್ತಾಗಿದ್ದ ಉತ್ತರಾಖಂಡ ಸಿಎಂ ಆಸ್ಪತ್ರೆಗೆ ದಾಖಲು
ಇತ್ತೀಚೆಗಷ್ಟೇ ಕೊರೋನಾ ಸೋಂಕಿಗೆ ತುತ್ತಾಗಿದ್ದ ಉತ್ತರಾಖಂಡ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.

ಡೆಹ್ರಾಡೂನ್: ಇತ್ತೀಚೆಗಷ್ಟೇ ಕೊರೋನಾ ಸೋಂಕಿಗೆ ತುತ್ತಾಗಿದ್ದ ಉತ್ತರಾಖಂಡ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.
ತ್ರಿವೇಂದ್ರ ಸಿಂಗ್ ರಾವತ್ ಅವರಿಗೆ ಡಿಸೆಂಬರ್ 18ರಂದು ಕೋವಿಡ್-19ಸೋಂಕು ದೃಢಪಟ್ಟಿತ್ತು. ಹೀಗಾಗಿ ಮನೆಯಲ್ಲೇ ಪ್ರತ್ಯೇಕವಾಗಿದ್ದುಕೊಂಡು ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಸಂಜೆ ಅವರು ಡೂನ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮೂಲಗಳ ಪ್ರಕಾರ ತ್ರಿವೇಂದ್ರ ಸಿಂಗ್ ರಾವತ್ ಅವರಿಗೆ ಜ್ವರ ಕಾಣಿಸಿಕೊಂಡಿದ್ದರಿಂದ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಸ್ತುತ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವರದಿಯಾಗಿದೆ.
ಆಗಸ್ಟ್‌ನಲ್ಲಿ ಅಧಿಕಾರಿಗಳ ಪೈಕಿ ಮೂವರಿಗೆ ಕೋವಿಡ್ ಸೋಂಕು ದೃಢಪಟ್ಟಾಗಲೂ ರಾವತ್ ಅವರು ಪ್ರತ್ಯೇಕ ವಾಸದಲ್ಲಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


