ಮನ್ ಕಿ ಬಾತ್: ಚಕ್ರವರ್ತಿ ಸೂಲಿಬೆಲೆ ನೇತೃತ್ವದ ಯುವ ಬ್ರಿಗೇಡ್ ತಂಡದ ಸಾಮಾಜಿಕ ಕೆಲಸಕ್ಕೆ ಪ್ರಧಾನಿ ಮೋದಿ ಪ್ರಶಂಸೆ
ಪ್ರಧಾನಿ ನರೇಂದ್ರ ಮೋದಿ ಡಿ.27 ರಂದು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿರುವ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಕರ್ನಾಟಕದ ಯುವಾ ಬ್ರಿಗೇಡ್ ಬಗ್ಗೆಯೂ ಮಾತನಾಡಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಡಿ.27 ರಂದು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿರುವ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಕರ್ನಾಟಕದ ಯುವಾ ಬ್ರಿಗೇಡ್ ಬಗ್ಗೆಯೂ ಮಾತನಾಡಿದ್ದಾರೆ.
ಇತ್ತೀಚೆಗಷ್ಟೇ ಶ್ರೀರಂಗಪಟ್ಟಣದಲ್ಲಿ ಚಕ್ರವರ್ತಿ ಸೂಲಿಬೆಲೆ ನೇತೃತ್ವದ ಯುವಾ ಬ್ರಿಗೇಡ್ ತಂಡ ಶಿಥಿಲಗೊಂಡಿದ್ದ, ಅವ್ಯವಸ್ಥೆಗೀಡಾಗಿದ್ದ ವೀರಭದ್ರಸ್ವಾಮಿ ದೇವಾಲಯದ ಜೀರ್ಣೋದ್ಧಾರ ಮಾಡಿತ್ತು. ಈ ಜೀರ್ಣೋದ್ಧಾರ ಕಾಮಗಾರಿಯ ಫೋಟೋಗಳು ಸಹ ವೈರಲ್ ಆಗಿತ್ತು. ಅದೇ ಫೋಟೋಗಳ ಬಗ್ಗೆ
ಪ್ರಧಾನಿ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮುಕ್ತ ಕಂಠದಿಂದ ಶ್ಲಾಘಿಸಿದ್ದು, ಇಚ್ಛಾಶಕ್ತಿ, ಬದ್ಧತೆ ಇದ್ದಲ್ಲಿ ಯಾವುದನ್ನೂ ಸಾಧಿಸಬಹುದು ಎಂಬುದಕ್ಕೆ ಯುವಾ ಬ್ರಿಗೇಡ್ ತಂಡ ಉದಾಹರಣೆ ಎಂದು ಹೇಳಿದ್ದಾರೆ.
"ಸಾಧಿಸುವ ಛಲ, ಚೈತನ್ಯ, ಮಾಡಬೇಕೆಂಬ ಹುಮ್ಮಸ್ಸು ಕಂಡಾಗ ದೇಶದ ಯುವಕರ ಬಗ್ಗೆ ಸಂತೋಷ ಮತ್ತು ಭರವಸೆ" ಮೂಡುತ್ತದೆ, ಇಂತಹ ಇಚ್ಛಾಶಕ್ತಿ ಹೊಂದಿದ ಯುವಕರಿಗೆ ಯಾವುದೂ ಸಹ ದೊಡ್ಡ ಸವಾಲಲ್ಲ ಹಾಗೂ ಅಂತಹ ಯುವ ಶಕ್ತಿಗೆ ಯಾವುದೂ ಅಸಾಧ್ಯವಲ್ಲ ಎಂದು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಮೆಚ್ಚುಗೆ ಮಾತುಗಳಿಗೆ ಪ್ರತಿಕ್ರಿಯೆ ನೀಡಿರುವ ಯುವಾಬ್ರಿಗೇಡ್ ನ ಮಾರ್ಗದರ್ಶಕ ಚಕ್ರವರ್ತಿ ಸೂಲಿಬೆಲೆ, ಪ್ರಧಾನಿಗಳ ಮೆಚ್ಚುಗೆಯ ಮಾತುಗಳಿಂದ ಈಗ ನಮ್ಮ ಶಕ್ತಿ ನೂರ್ಮಡಿಯಾಗಿದೆ ಎಂದು ಸಂತಸ ಹಂಚಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


