ದೇಶ

ಕೋವಿಡ್-19: 6 ತಿಂಗಳ ಬಳಿಕ ದೇಶದಲ್ಲಿ ಇದೇ ಮೊದಲ ಬಾರಿಗೆ ಅತೀ ಕಡಿಮೆ ಪ್ರಕರಣ

ಬ್ರಿಟನ್ ಸೇರಿದಂತೆ ಹತ್ತು ಹಲವು ರಾಷ್ಟ್ರಗಳಲ್ಲಿ ಹೈಸ್ಪೀಡ್ ಕೊರೋನಾ ಪತ್ತೆಯಾಗಿ ಆತಂಕ ಹೆಚ್ಚಾಗಿರುವಾಗಲೇ ದೇಶದಲ್ಲಿ ಹೊಸ ಕೊರೋನಾ ಸೋಂಕಿತರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಕುಸಿತ ಕಂಡಿದೆ.

ಕೋವಿಡ್-19: 6 ತಿಂಗಳ ಬಳಿಕ ದೇಶದಲ್ಲಿ ಇದೇ ಮೊದಲ ಬಾರಿಗೆ ಅತೀ ಕಡಿಮೆ ಪ್ರಕರಣ
ಸಂಗ್ರಹ ಚಿತ್ರ
Published On :

ನವದೆಹಲಿ: ಬ್ರಿಟನ್ ಸೇರಿದಂತೆ ಹತ್ತು ಹಲವು ರಾಷ್ಟ್ರಗಳಲ್ಲಿ ಹೈಸ್ಪೀಡ್ ಕೊರೋನಾ ಪತ್ತೆಯಾಗಿ ಆತಂಕ ಹೆಚ್ಚಾಗಿರುವಾಗಲೇ ದೇಶದಲ್ಲಿ ಹೊಸ ಕೊರೋನಾ ಸೋಂಕಿತರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಕುಸಿತ ಕಂಡಿದೆ. 

ಭಾನುವಾರ ಬೆಳಗ್ಗೆ 8ರವರೆಗೆ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 18,732 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ 1 ಲಕ್ಷದ ಗಡಿವರೆಗೆ ತಲುಪಿದ್ದ ದೈನಂದಿನ ಸೋಂಕು 19 ಸಾವಿರಕ್ಕಿಂದ ಕೆಳಕ್ಕೆ ಇಳಿಯುತ್ತಿರುವುದು 6 ತಿಂಗಳಲ್ಲಿ ಇದೇ ಮೊದಲಾಗಿದೆ. 

ಮತ್ತೊಂದೆಡೆ ಸಕ್ರಿಯ ಕೊರೋನಾ ಸೋಂಕಿತರ ಸಂಖ್ಯೆ 3 ಲಕ್ಷಕ್ಕಿಂತ ಕೆಳಕ್ಕೆ ಬಂದಿದೆ. ಸದ್ಯ ದೇಶದಲ್ಲಿ 2,78,690 ಸಕ್ರಿಯ ಕೊರೋನಾ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಇದು 167 ದಿನಗಳಲ್ಲೇ ಅತಿ ಕಡಿಮೆ ಸಂಖ್ಯೆಯಾಗಿದೆ. 

ದೇಶದಲ್ಲಿ ಮಂಗಳವಾರ 18,732  ಹೊಸ ಪ್ರಕರಣಗಳೊಂದಿಗೆ ಒಟ್ಟಾರೆ ಸೋಂಕಿತರ ಸಂಖ್ಯೆ 1,01,87,850ಕ್ಕೆ ಏರಿಕೆಯಾಗಿದೆ, 

ಇನ್ನು ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 279 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 1,47,622ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಈ ನಡುವೆ ಒಂದೇ ದಿನ 21,430 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಇದರೊಂದಿಗೆ ಈ ವರೆಗೂ ಗುಣಮುಖರಾದವರ ಸಂಖ್ಯೆ 97,61,538ಕ್ಕೆ ಏರಿಕೆಯಾಗಿದೆ. 

ಈ ನಡುವೆ ನಿನ್ನೆ ಒಂದೇ ದಿನ ದೇಶಾದ್ಯಂತ 9,43,368 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದ್ದು, ಭಾರತದಲ್ಲಿ ಒಟ್ಟಾರೆ 16,81,02,657 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.