ಲವ್ ಜಿಹಾದ್ ಕಾನೂನಿನ ಬಗ್ಗೆ ನಿಲುವು ಸ್ಪಷ್ಟಪಡಿಸಿದ ಬಿಜೆಪಿ ಮಿತ್ರ ಪಕ್ಷ ಜೆಡಿಯು
ಬಿಜೆಪಿ ಮಿತ್ರ ಪಕ್ಷ ಜೆಡಿಯು ಲವ್ ಜಿಹಾದ್ ವಿರುದ್ಧ, ವಿವಾಹಕ್ಕಾಗಿ ಮತಾಂತರಗೊಳ್ಳುವುದನ್ನು ನಿರ್ಬಂಧಿಸುವ ಕಾಯ್ದೆಯ ಬಗ್ಗೆ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ.

ನವದೆಹಲಿ: ಬಿಜೆಪಿ ಮಿತ್ರ ಪಕ್ಷ ಜೆಡಿಯು ಲವ್ ಜಿಹಾದ್ ವಿರುದ್ಧ, ವಿವಾಹಕ್ಕಾಗಿ ಮತಾಂತರಗೊಳ್ಳುವುದನ್ನು ನಿರ್ಬಂಧಿಸುವ ಕಾಯ್ದೆಯ ಬಗ್ಗೆ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ.
ಜೆಡಿಯು ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಬಳಿಕ ಮಾತನಾಡಿರುವ ಕೆಸಿ ತ್ಯಾಗಿ, ಲವ್ ಜಿಹಾದ್, ವಿವಾಹಕ್ಕಾಗಿ ಮತಾಂತರದ ಕಾನೂನು ಸಮಾಜದಲ್ಲಿ ದ್ವೇಷ ಮೂಡಿಸುತ್ತದೆ, ಸಮಾಜವನ್ನು ವಿಭಜಿಸುತ್ತದೆ ಆದ್ದರಿಂದ ಇಂತಹ ಕಾಯ್ದೆಗಳನ್ನು ಜೆಡಿಯು ಬೆಂಬಲಿಸುವುದಿಲ್ಲ ಎಂದು ಹೇಳಿದ್ದಾರೆ.
ಲವ್ ಜಿಹಾದ್ ಹೆಸರಿನಲ್ಲಿ ಸಮಾಜದಲ್ಲಿ ದ್ವೇಷ ಹಾಗೂ ವಿಭಜನೆಯನ್ನು ಸೃಷ್ಟಿಸಲಾಗುತ್ತಿದೆ. ಮುಸ್ಲಿಂ ಯುವಕರು ಹಿಂದೂ ಯುವತಿಯರನ್ನು ಮತಾಂತರಗೊಳಿಸುವುದಕ್ಕಾಗಿ ಪ್ರೀತಿಸುವುದನ್ನು ಲವ್ ಜಿಹಾದ್ ಪದವನ್ನು ಬಲಪಂಥೀಯ ಕಾರ್ಯಕರ್ತರು ಸೃಷ್ಟಿಸಿದ್ದಾರೆ
ವಯಸ್ಕರು ಯಾರು ತಮ್ಮ ಸಂಗಾತಿಯಾಗಬೇಕೆಂದು ಬಯಸುತ್ತಾರೋ ಅವರನ್ನು ಆಯ್ಕೆ ಮಾಡಿಕೊಳ್ಳುವುದಕ್ಕೆ ಸಂವಿಧಾನ ಹಾಗೂ ಸಿಆರ್ ಪಿಸಿ ಸ್ವಾತಂತ್ರ್ಯ ನೀಡಿದೆ. ಧರ್ಮ, ಮತಗಳನ್ನು ಅವರ ಇಚ್ಛೆಗೆ ತಕ್ಕಂತೆ ಅನುಸರಿಸುವುದಕ್ಕೆ ಸ್ವಾತಂತ್ರ್ಯ ನೀಡಲಾಗಿದೆ, ಈ ಸ್ವಾತಂತ್ರ್ಯವನ್ನು ರಾಮ್ ಮನೋಹರ್ ಲೋಹಿಯಾ ಆದಿಯಾಗಿ ಸಮಾಜವಾದಿಗಳು ಎಂದಿಗೂ ಎತ್ತಿ ಹಿಡಿದಿದ್ದಾರೆ ಎಂದು ತ್ಯಾಗಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


