ವಾಹನಗಳ ಮುಂಭಾಗದ ಪ್ರಯಾಣಿಕ ಸೀಟ್ ಗಳಲ್ಲಿ ಏರ್ ಬ್ಯಾಗ್ ಕಡ್ಡಾಯಗೊಳಿಸಲು ಸರ್ಕಾರದ ಪ್ರಸ್ತಾವನೆ
ವಾಹನಗಳ ಮುಂಭಾಗದ ಸೀಟ್ ಗಳಲ್ಲಿ ಏರ್ ಬ್ಯಾಗ್ ನ್ನು ಕಡ್ಡಾಯಗೊಳಿಸುವುದಕ್ಕೆ ಪ್ರಸ್ತಾವನೆ ಇದೆ ಎಂದು ಸರ್ಕಾರ ಹೇಳಿದೆ.

ನವದೆಹಲಿ: ವಾಹನಗಳ ಮುಂಭಾಗದ ಸೀಟ್ ಗಳಲ್ಲಿ ಏರ್ ಬ್ಯಾಗ್ ನ್ನು ಕಡ್ಡಾಯಗೊಳಿಸುವುದಕ್ಕೆ ಪ್ರಸ್ತಾವನೆ ಇದೆ ಎಂದು ಸರ್ಕಾರ ಹೇಳಿದೆ. ಅಪಘಾತ ಉಂಟಾದಾಗ ಪ್ರಯಾಣಿಕರ ಸುರಕ್ಷತೆಯನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಈ ಕ್ರಮಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ.
ರಸ್ತೆ ಸಾರಿಗೆ ಸಚಿವಾಲಯ ಈ ಸಂಬಂಧ ಅಧಿಸೂಚನೆಯ ಕರಡನ್ನು ತಯಾರಿಸಿದೆ ಎಂದು ಸಚಿವಾಲಯ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.
ಹೊಸ ಕಾರು, ವಾಹನಗಳಲ್ಲಿ ಏ.1, 2021 ರಿಂದ ಪ್ರಸ್ತಾವಿತ ಕಾನೂನು ಜಾರಿಗೆ ತರುವುದಕ್ಕೆ ನಿರ್ಧರಿಸಲಾಗಿದ್ದು, ಈಗಿರುವ ಮಾದರಿಯ ವಾಹನಗಳಲ್ಲಿ ಜೂ.1, 2021 ರಿಂದ ಇದನ್ನು ಜಾರಿಗೆ ತರಬೇಕಾಗುತ್ತದೆ. ಈ ಬಗ್ಗೆ ಸಂಬಂಧಪಟ್ಟವರಿಂದ ಸಲಹೆ, ಅಭಿಪ್ರಾಯಗಳನ್ನೂ ಸಚಿವಾಲಯ ಸಂಗ್ರಹಿಸಲು ಮುಂದಾಗಿದ್ದು, morth@gov.in ನಲ್ಲಿ 30 ದಿನಗಳ ಒಳಗಾಗಿ ಸಲ್ಲಿಸಬಹುದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


