ಕೇಂದ್ರ ಆರೋಗ್ಯ ಖಾತೆ ರಾಜ್ಯ ಸಚಿವ ಅಶ್ವಿನಿ ಕುಮಾರ್ ಗೆ ಕೊರೋನಾ ದೃಢ
ಕೇಂದ್ರ ಆರೋಗ್ಯ ಖಾತೆ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ತಾನು ಕೋವಿಡ್ -19 ಪಾಸಿಟಿವ್ ವರದಿ ಪಡೆದಿದ್ದೇನೆ. ಹೋಮ್ ಐಸೋಲೇಷನ್ ನಲ್ಲಿದ್ದೇನೆ ಎಂದು ಸಚಿವರು ಹೇಳಿದ್ದಾರೆ.

ನವದೆಹಲಿ: ಕೇಂದ್ರ ಆರೋಗ್ಯ ಖಾತೆ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ತಾನು ಕೋವಿಡ್ -19 ಪಾಸಿಟಿವ್ ವರದಿ ಪಡೆದಿದ್ದೇನೆ. ಹೋಮ್ ಐಸೋಲೇಷನ್ ನಲ್ಲಿದ್ದೇನೆ ಎಂದು ಸಚಿವರು ಹೇಳಿದ್ದಾರೆ.
ಕೊರೋನಾವೈರಸ್ ಸೋಂಕಿನ ಆರಂಭಿಕ ಲಕ್ಷಣ ವ್ಯಕ್ತವಾದ ನಂತರ ಪರೀಕ್ಷೆಗೆ ಒಳಗಾಗಿದ್ದೇನೆ ಎಂದು ಚೌಬೆ ಸೋಮವಾರ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಅಲ್ಲದೆ ಇತ್ತೀಚೆಗೆ ಅವರೊಂದಿಗೆ ಸಂಪರ್ಕಕ್ಕೆ ಬಂದ ಪ್ರತಿಯೊಬ್ಬರೂ ಕೋವಿಡ್ ಪರೀಕ್ಷೆಗೆ ಒಳಗಾಗಬೇಕೆಂದು ಅವರು ಆಗ್ರಹಿಸಿದರು.
"ಕೊರೋನಾವೈರಸ್ ಸೋಂಕಿನ ಆರಂಭಿಕ ರೋಗಲಕ್ಷಣಗಳನ್ನು ಕಂಡುಕೊಂಡ ನಂತರ ನಾನು ಪರೀಕ್ಷೆಯನ್ನು ಮಾಡಿದ್ದೇನೆ ಮತ್ತು ವರದಿ ಪಾಸಿಟಿವ್ ಆಗಿ ಬಂದಿದೆ. ನನ್ನ ಆರೋಗ್ಯವು ಉತ್ತಮವಾಗಿದೆ ಮತ್ತು ವೈದ್ಯರ ಸಲಹೆಯ ಮೇರೆಗೆ ನಾನು ಹೋಮ್ ಐಸೋಲೇಷನ್ ನಲ್ಲಿದ್ದೇನೆ. ಎಲ್ಲಾ ಮಾರ್ಗಸೂಚಿಗಳನ್ನು ಅನುಸರಿಸುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನೊಂದಿಗೆ ಸಂಪರ್ಕಕ್ಕೆ ಬಂದವರು ದಯವಿಟ್ಟು ತಮ್ಮನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿಕೊಳ್ಳಿ ಹಾಗೂ ಐಸೋಲೇಷನ್ ನಲ್ಲಿರಿ ಎಂದು ಮನವಿ ಮಾಡುತ್ತೇನೆ"ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


