ತಮಿಳುನಾಡು ವಿಧಾನಸಭೆ ಚುನಾವಣೆ ಘೋಷಣೆಯಾದ ನಂತರ ಎನ್ ಡಿಎ ಸಿಎಂ ಅಭ್ಯರ್ಥಿ ಪ್ರಕಟ: ಸಿಟಿ ರವಿ
ತಮಿಳುನಾಡು ವಿಧಾನಸಭೆ ಚುನಾವಣೆಯ ದಿನಾಂಕ ಪ್ರಕಟವಾದ ನಂತರ ಎನ್‌ಡಿಎ ಸಮನ್ವಯ ಸಮಿತಿ, ಎನ್ ಡಿಎ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಲಿದೆ ಮತ್ತು ಮುಖ್ಯಮಂತ್ರಿ ಅಭ್ಯರ್ಥಿ ಅತಿ ದೊಡ್ಡ ಮೈತ್ರಿ ಪಕ್ಷ ಎಎಐಡಿಎಂಕೆಯವರಾಗಿರುತ್ತಾರೆ...

ನವದೆಹಲಿ: ತಮಿಳುನಾಡು ವಿಧಾನಸಭೆ ಚುನಾವಣೆಯ ದಿನಾಂಕ ಪ್ರಕಟವಾದ ನಂತರ ಎನ್‌ಡಿಎ ಸಮನ್ವಯ ಸಮಿತಿ, ಎನ್ ಡಿಎ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಲಿದೆ ಮತ್ತು ಮುಖ್ಯಮಂತ್ರಿ ಅಭ್ಯರ್ಥಿ ಅತಿ ದೊಡ್ಡ ಮೈತ್ರಿ ಪಕ್ಷ ಎಎಐಡಿಎಂಕೆಯವರಾಗಿರುತ್ತಾರೆ ಎಂದು ತಮಿಳುನಾಡು ಬಿಜೆಪಿ ಉಸ್ತುವಾರಿ ಸಿ.ಟಿ.ರವಿ ಅವರು ಬುಧವಾರ ಹೇಳಿದ್ದಾರೆ.
"ತಮಿಳುನಾಡಿನಲ್ಲಿ, ಎಐಎಡಿಎಂಕೆ ಎನ್‌ಡಿಎ ಮೈತ್ರಿಕೂಟದಲ್ಲಿ ಅತಿದೊಡ್ಡ ಪಾಲುದಾರ ಪಕ್ಷ. ಹೀಗಾಗಿ ಆ ಪಕ್ಷದವರೇ ಮುಖ್ಯಮಂತ್ರಿ ಅಭ್ಯರ್ಥಿಯಾಗುವುದು ಸಹಜ. ಪ್ರಸ್ತುತ, ಇಕೆ ಪಳನಿಸ್ವಾಮಿ ನಮ್ಮ ಮುಖ್ಯಮಂತ್ರಿಯಾಗಿದ್ದಾರೆ. ಚುನಾವಣೆ ಘೋಷಣೆಯಾದ ನಂತರ ಎನ್‌ಡಿಎ ಸಮನ್ವಯ ಸಮಿತಿ ಸಿಎಂ ಅಭ್ಯರ್ಥಿಯನ್ನು ಪ್ರಕಟಿಸಲಿದೆ ಎಂದು ಸಿಟಿ ರವಿ ಟ್ವೀಟ್ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ದಿ. ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಜನರ ಸ್ನೇಹಿ ಯೋಜನೆಗಳನ್ನು ಜನರಿಗೆ ತಲುಪಿಸುವ ಮೂಲಕ ತಮಿಳುನಾಡನ್ನು ಸಮೃದ್ಧಿಯ ಹೆದ್ದಾರಿಯಲ್ಲಿ ಕೊಂಡೊಯ್ಯುವುದು ನಮ್ಮ ಗುರಿ ಎಂದು ಸಿಟಿ ಹೇಳಿದ್ದಾರೆ.
ಮುಂಬರುವ ಚುನಾವಣೆಯಲ್ಲಿ ಪಳನಿಸ್ವಾಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂದು ಎಐಎಡಿಎಂಕೆ ನಾಯಕ ಒ ಪನ್ನೀರ್ ಸೇಲ್ವಂ ಅವರು ಕಳೆದ ಸೆಪ್ಟೆಂಬರ್ ನಲ್ಲಿ ಘೋಷಿಸಿದ್ದರು.
In Tamil Nadu, AIADMK is the largest partner in NDA alliance. It is natural that the Chief Minister will be from largest partner.
— C T Ravi
At present, Thiru @CMOTamilNadu is Our Chief Minister. Once Elections are announced, the NDA Co-ordination Committee will announce the CM candidate.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


