ದೇಶ

ಕೋವಿಡ್ -19: ಒಡಿಶಾದಲ್ಲಿ ಹೊಸ ವರ್ಷದ ರಾತ್ರಿ ಕರ್ಫ್ಯೂ ಜಾರಿ

ಕೋವಿಡ್ -19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಜನರು ದೊಡ್ಡ ಮಟ್ಟದಲ್ಲಿ ಒಂದೇ ಕಡೆ ಸೇರುವುದನ್ನು ತಪ್ಪಿಸಲು ಒಡಿಶಾ ಸರ್ಕಾರ ಗುರುವಾರ ರಾತ್ರಿ 10 ಗಂಟೆಯಿಂದ ಕರ್ಫ್ಯೂ ವಿಧಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೋವಿಡ್ -19: ಒಡಿಶಾದಲ್ಲಿ ಹೊಸ ವರ್ಷದ ರಾತ್ರಿ ಕರ್ಫ್ಯೂ ಜಾರಿ
ಒಡಿಶಾ ಸಿಎಂ ನವೀನ್ ಪಟ್ನಾಯಕ್
Published On :

ಭುವನೇಶ್ವರ: ಕೋವಿಡ್ -19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಜನರು  ದೊಡ್ಡ ಮಟ್ಟದಲ್ಲಿ ಒಂದೇ ಕಡೆ ಸೇರುವುದನ್ನು ತಪ್ಪಿಸಲು ಒಡಿಶಾ ಸರ್ಕಾರ ಗುರುವಾರ ರಾತ್ರಿ 10 ಗಂಟೆಯಿಂದ ಕರ್ಫ್ಯೂ ವಿಧಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಜ್ಯಾದ್ಯಂತ ಇಂದು ರಾತ್ರಿ 10 ಗಂಟೆಯಿಂದ ನಾಳೆ ಬೆಳಗ್ಗೆ 5 ಗಂಟೆಯವರೆಗೆ ಈ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ವಿಶೇಷ ಪರಿಹಾರ ಆಯುಕ್ತ(ಎಸ್‌ಆರ್‌ಸಿ) ಪಿ ಕೆ ಜೆನಾ ಅವರು ಹೇಳಿದ್ದಾರೆ.

ಆದಾಗ್ಯೂ, ಕರ್ಫ್ಯೂ ಸಮಯದಲ್ಲಿ ಎಲ್ಲಾ ಅಗತ್ಯ ಸೇವೆಗಳಿಗೆ ಅನುಮತಿ ನೀಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇಂದು ರಾತ್ರಿ 10 ಗಂಟೆಯಿಂದ ನಾಳೆ ಬೆಳಗ್ಗೆ 5 ಗಂಟೆಯವರೆಗೆ ರಾಜ್ಯಾದ್ಯಂತ ಒಡಿಶಾ ಸರ್ಕಾರ ರಾತ್ರಿ ಕರ್ಫ್ಯೂ ವಿಧಿಸುತ್ತಿದೆ. ಸಾರ್ವಜನಿಕರು ಸಹಕರಿಸಬೇಕು. ಈ ವೇಳೆ ಎಲ್ಲಾ ಅಗತ್ಯ ಸೇವೆಗಳಿಗೆ ಅನುಮತಿ ನೀಡಲಾಗಿದೆ ಎಂದು ಜೆನಾ ಅವರು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.