ಕಣಿವೆ ರಾಜ್ಯದಲ್ಲಿ ಎನ್ ಕೌಂಟರ್: ಜೈಶ್-ಇ- ಮೊಹಮದ್ ಸಂಘಟನೆಯ 3 ಉಗ್ರರು ಫಿನಿಶ್
ಜನವರಿ 31 ರಂದು ನಡೆದ ಗುಂಡಿನ ದಾಳಿಯಲ್ಲಿ ಜೈಶ್-ಇ- ಮೊಹಮದ್ ಉಗ್ರ ಸಂಘಟನೆಯ ಮೂವರು ಉಗ್ರರನ್ನು ಭಾರತೀಯ ಭದ್ರತಾ ಪಡೆಯು ಹೊಡೆದುರುಳಿಸಿದೆ. ಇವರು ಇತ್ತೀಚೆಗೆ ಪಾಕಿಸ್ತಾನ ಗಡಿಯಿಂದ ನುಸುಳಿ ಬಂದಿದ್ದರು ಎಂದು ಜಮ್ಮು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ .

ಜಮ್ಮು: ಜನವರಿ 31 ರಂದು ನಡೆದ ಗುಂಡಿನ ದಾಳಿಯಲ್ಲಿ ಜೈಶ್-ಇ- ಮೊಹಮದ್ ಉಗ್ರ ಸಂಟನೆಯ ಮೂವರು ಉಗ್ರರನ್ನು ಭಾರತೀಯ ಭದ್ರತಾ ಪಡೆಯು ಹೊಡೆದುರುಳಿಸಿದೆ. ಇವರು ಇತ್ತೀಚೆಗೆ ಪಾಕಿಸ್ತಾನ ಗಡಿಯಿಂದ ನುಸುಳಿ ಬಂದಿದ್ದರು ಎಂದು ಜಮ್ಮು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ .
ಬೆಳ್ಳಂಬೆಳಗ್ಗೆ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ತಪಾಸಣೆ ವೇಳೆ ಟ್ರಕ್ ನಲ್ಲಿ ಉಗ್ರರನ್ನು ಕರೆದುಕೊಂಡು ಹೋಗಲಾಗುತ್ತಿತ್ತು. ಟ್ರಕ್ ತಪಾಸಣೆ ವೇಳೆ ಭದ್ರತಾ ಸಿಬ್ಬಂದಿ ಮೇಲೆ ಉಗ್ರನೊಬ್ಬ ಗುಂಡಿನ ದಾಳಿ ನಡೆಸಿದ್ದು, ಒಬ್ಬ ಭದ್ರತಾ ಸಿಬ್ಬಂದಿಗೆ ಗಾಯವಾಗಿತ್ತು.
ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲೇ ಉಗ್ರರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆಯಿತು. ಭಾರತೀಯ ಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಲಾಯಿತು.
ಟ್ರಕ್ ಚಾಲಕ ಸಲೀಂ ದಾರ್ ಗೂ ಜೈಶ್ -ಇ ಮೊಹಮ್ಮದ್ ಸಂಘಟನೆಗೂ ಮೊದಲಿನಿಂದಲೂ ನಂಟು ಇರುವ ಶಂಕೆ ವ್ಯಕ್ತವಾಗಿದೆ. ಇದಕ್ಕೆ ಪುಷ್ಟಿ ನೀಡುವಂತೆ ಪುಲ್ವಾಮಾ ದಾಳಿಯ ಉಗ್ರ ಆದಿಲ್ ದಾರ್ ಮತ್ತು ಸಲೀಂ ದಾರ್ ಇಬ್ಬರೂ ಸಂಬಂಧಿಕರು ಎಂದು ಆರೋಪಿಸಲಾಗಿದೆ. ಈ ಬಗ್ಗೆ ಭದ್ರತಾ ಸಿಬ್ಬಂದಿ ತನಿಖೆ ನಡೆಸುತ್ತಿದ್ದಾರೆ.
ಇನ್ನು, ಉಗ್ರರ ವಿರುದ್ಧ ನಡೆಸಿದ ಕಾರ್ಯಾಚರಣೆ ಬೆನ್ನಲ್ಲೇ ಐದು ಎಕೆ-47, ಅಮೆರಿಕಾದಲ್ಲಿ ಸಿದ್ಧಗೊಂಡ ರೈಫಲ್ ಮತ್ತು ಐದು ಪಿಸ್ತೂಲ್ ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಮ್ಮು-ಕಾಶ್ಮೀರದ ಡಿಜಿಪಿ ದಿಲ್ಬಾಗ್ ಸಿಂಗ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


